ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ವ್ಯಾಪ್ತಿಯ ಕಲ್ಲಹಳ್ಳಿ–ಪಡಗೂರು ಬಳಿ ಸೋಮವಾರ ಬೆಳಗಿನ ಜಾವ ಹುಲಿ ಸೆರೆ ಹಿಡಿಯಲಾಗಿದ್ದು ಮೂರು ಮರಿಗಳನ್ನು ರಕ್ಷಣೆ ಮಾಡಲಾಗಿದೆ.

ನಾಲ್ಕು ವರ್ಷದ ಹೆಣ್ಣು ಹುಲಿ ಕಲ್ಲಹಳ್ಳಿ–ಪಡಗೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಮಾನವ ಪ್ರಾಣಿ ಸಂಘರ್ಷಕ್ಕೆ ಕಾರಣವಾಗಿತ್ತು. ಸಾಕಾನೆಗಳಾದ ಭೀಮ, ಮಹೇಂದ್ರ, ಸುಗ್ರೀವ ಹಾಗೂ ಲಕ್ಷ್ಮಣನನ್ನು ಬಳಸಿಕೊಂಡು ಹುಲಿಯನ್ನು ಸೆರೆ ಹಿಡಿಯಸಲಾಗಿದೆ. ಹುಲಿ ಹಾಗೂ ಮರಿಗಳು ಆರೋಗ್ಯವಾಗಿದ್ದು ಬಂಡೀಪುರಕ್ಕೆ ಸಾಗಿಸಲಾಗಿದ್ದು ಪಶು ವೈದ್ಯಾಧಿಕಾರಿಗಳು ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಸುರೇಶ್ ತಿಳಿಸಿದ್ದಾರೆ.

ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಹುಲಿಗಳು ಕಾಣಿಸಿಕೊಂಡು ಜನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಹುಲಿಗಳನ್ನು ಸೆರೆ ಹಿಡಿಯಲು ಆದೇಶ ನೀಡಲಾಗಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.
.ಹುಲಿ, ಆನೆಗಳು ಕಾಡಿನಿಂದ ಹೊರ ಬರಲು ಕಾರಣ ಏನ್ರಿ? ಅಧಿಕಾರಿಗಳ ಮೇಲೆ ಸಿಎಂ ಗರಂ.ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜಿಂಕೆ ಬೇಟೆ: ಇಬ್ಬರ ಸೆರೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.