ಚಾಮರಾಜನಗರ: ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ತಾಲ್ಲೂಕಿನ ನಂಜೇದೇವನಪುರ ಗ್ರಾಮದ ಬಳಿ ಶನಿವಾರ ರಾತ್ರಿ 10 ತಿಂಗಳ ಗಂಡು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಉಳಿದ ಎರಡು ಮರಿಗಳಿಗೆ ಶೋಧ ನಡೆದಿದೆ.

ಸೆರೆ ಸಿಕ್ಕಿರುವ ಮರಿಯನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದ್ದು ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಉಳಿದ ಎರಡು ಹುಲಿ ಮರಿಗಳ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ನಂಜೇದೇವನಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭೀತಿ ಹುಟ್ಟಿಸಿದ್ದ ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಸೆರೆಗೆ ಒಂದು ತಿಂಗಳಿನಿಂದ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ. ದುಬಾರೆ ಶಿಬಿರದ ನಾಲ್ಕು ಸಾಕಾನೆ, ಥರ್ಮಲ್ ಡ್ರೋನ್, ಅರವಳಿಕೆ ತಜ್ಞರು, ಪಶು ವೈದ್ಯರು ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಶ್ರಮಿಸುತ್ತಿದೆ.

ಜ.9ರಂದು ತಾಯಿ ಹುಲಿ, ಜ.15ರಂದು ಮರಿ ಹುಲಿ ಸೆರೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.