ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ: ಕಾದಾಟದಲ್ಲಿ ಹುಲಿಗೆ ಗಾಯ, ಅರಣ್ಯ ಅಧಿಕಾರಿಗಳ ನಿಗಾ

Last Updated 20 ಅಕ್ಟೋಬರ್ 2021, 16:09 IST
ಅಕ್ಷರ ಗಾತ್ರ

ಗುಂಡ್ಲುಪೇಟೆ:ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ವಲಯದ ಗಂಜಿಕಟ್ಟೆ ಅರಣ್ಯ ಪ್ರದೇಶದ ಬಳಿ 7 ರಿಂದ 8 ವರ್ಷದ ಗಂಡು ಹುಲಿಯೊಂದು ಮತ್ತೊಂದು ಹುಲಿಯ ಜೊತೆ ನಡೆಸಿದ ಕಾದಾಟದಲ್ಲಿ ಗಾಯಗೊಂಡಿದೆ.

ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಹುಲಿ ಗಾಯಗೊಂಡಿರುವುದು ಪತ್ತೆಯಾಗಿದೆ. ತಕ್ಷಣವೇ ಅವರು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಅರಣ್ಯ ಇಲಾಖೆ ಬಿಡುಗಡೆ ಮಾಡಿರುವ ಚಿತ್ರದಲ್ಲಿ ಹುಲಿಯ ಬೆನ್ನಿನ ಕೆಳಭಾಗದ ಎರಡು ಕಡೆಗಳಲ್ಲಿ ದೊಡ್ಡ ಗಾಯವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

‘ಗಾಯದ ಕಾರಣದಿಂದ ಹುಲಿಗೆ ಬೇಟೆಯಾಡಲು ಆಗುತ್ತಿಲ್ಲ. ಅದು ಹಸಿವು ಮತ್ತು ನಿಶ್ಯಕ್ತಿಯಿಂದ ಬಳಲುತ್ತಿದೆ. ಹುಲಿಯು ಚೇತರಿಸಿಕೊಳ್ಳುತ್ತಿರುವ ಲಕ್ಷಣಗಳು ಗೋಚರಿಸಿವೆ. ಅದರ ಚಲನವಲನಗಳ ಮೇಲೆ ನಿಗಾ ಇಡುವುದಕ್ಕಾಗಿ ಕ್ಯಾಮೆರಾ ಟ್ರ್ಯಾಪ್‌ಗಳನ್ನು ಅಳವಡಿಸಲಾಗಿದೆ. ಸಿಬ್ಬಂದಿ ಅದರ ಮೇಲೆ ನಿಗಾ ಇಡಲಿದ್ದಾರೆ. ಒಂದು ವೇಳೆ ಹುಲಿಯು ಚೇತರಿಸಿಕೊಳ್ಳದೇ ಇದ್ದಲ್ಲಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಯಂತೆ ಕ್ರಮವಹಿಸಲಾಗುವುದು’ ಎಂದುಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್‌.ಆರ್.ನಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT