ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡ್ಲುಪೇಟೆ | ಬೈಕ್‌‌‌ಗೆ ಟಿಪ್ಪರ್ ಡಿಕ್ಕಿ: ಕೇರಳ ಮೂಲದ ಮೂವರ ಸಾವು

Published : 17 ಸೆಪ್ಟೆಂಬರ್ 2024, 15:15 IST
Last Updated : 17 ಸೆಪ್ಟೆಂಬರ್ 2024, 15:15 IST
ಫಾಲೋ ಮಾಡಿ
Comments

ಗುಂಡ್ಲುಪೇಟೆ: ಟಿಪ್ಪರ್ ಲಾರಿ ಬೈಕ್‌‌‌‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿರುವ ಘಟನೆ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಕೇರಳ ಮೂಲದ ಪತಿ, ಪತ್ನಿ ಮತ್ತು ಮಗ ಎಂದು ಗುರುತಿಸಲಾಗಿದೆ. ಮೂವರು ಒಂದೇ ಬೈಕ್‌‌‌ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದರು. ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ (ಕೆ.ಎ.11-ಬಿ 8497) ನೋಂದಣಿ ಟಿಪ್ಪರ್ ಲಾರಿ ಚಾಲಕ ಕುಡಿದ ಮತ್ತಿನಲ್ಲಿ ಚಾಲನೆ ಮಾಡಿ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.

ಹೊಡೆತದ ತೀವ್ರತೆಗೆ ಬೈಕ್ ಸವಾರನ ಮೇಲೆ ಲಾರಿ ಹರಿದು ದೇಹ ರಸ್ತೆಯಲ್ಲೇ ಜಜ್ಜಿಹೋಗಿತ್ತು ಎನ್ನಲಾಗಿದೆ. ಇನ್ನಿಬ್ಬರು ಲಾರಿ ಅಡಿಯಲ್ಲಿ ಬೈಕ್ ಸಮೇತ ಸಿಲುಕಿಕೊಂಡಿದ್ದರೂ ಸುಮಾರು 300 ಮೀಟರ್ ದೇಹಗಳನ್ನು ಎಳೆದುಕೊಂಡು ಬಂದಿದೆ. ಇಬ್ಬರ ದೇಹದ ತುಂಡುಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಹರಡಿಕೊಂಡಿದ್ದವು ಎಂದು ಪೊಲೀಸರು ತಿಳಿಸಿದರು.

ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT