ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಪೋಸ್ಟರ್‌ ಬಿಡುಗಡೆಗೆ ಸೀಮಿತವಾದ ಪ್ರವಾಸೋದ್ಯಮ ದಿನ

Last Updated 27 ಸೆಪ್ಟೆಂಬರ್ 2021, 16:51 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಸೋಮವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನ ಪ್ರವಾಸಿ ತಾಣಗಳಿಗೆ ಸಂಬಂಧಿಸಿದ ಪೋಸ್ಟರ್‌ ಬಿಡುಗಡೆಗೆ ಮಾತ್ರ ಸೀಮಿತವಾಯಿತು.

ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಸರಳವಾಗಿ ಪ್ರವಾಸೋದ್ಯಮ ದಿನ ಆಚರಿಸಲಾಗುವುದು ಎಂದು ಜಿಲ್ಲಾಡಳಿತ ಹೇಳಿತ್ತು.

ಆದರೆ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಸೋಮವಾರ ಕಾರ್ಯಕ್ರಮ ನಡೆಯಿತು. ಪೋಸ್ಟರ್ ಬಿಡುಗಡೆ ಬಿಟ್ಟು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆ ಸಿದ್ಧತೆ ಮಾಡಿಕೊಂಡಂತೆ ಕಾಣಲಿಲ್ಲ. ಸಹಾಯಕ ನಿರ್ದೇಶಕರೇ ಕಾರ್ಯಕ್ರಮದಲ್ಲಿ ಇರಲಿಲ್ಲ.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ ಅವರು ಪೋಸ್ಟರ್‌ ಬಿಡುಗಡೆ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್‌.ಕೆ.ಗಿರೀಶ್‌, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಎ.ರಮೇಶ್‌, ಶಿರಸ್ತೇದಾರ ಅನೂಷ್‌, ಜಿಲ್ಲಾಧಿಕಾರಿ ಅವರ ಆಪ್ತ ಕಾರ್ಯದರ್ಶಿ ಭರತ್‌ಭೂಷಣ್‌, ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕಿ ಸೌಮ್ಯ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಜೊತೆಯಾದರು.

ಭಾಷಣ ಇಲ್ಲದೇ ಕಾರ್ಯಕ್ರಮ ಮುಕ್ತಾಯ ಕಂಡಿತು.ಸುಸ್ಥಿರ ಹಾಗೂ ಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮ ಎಂಬ ಸಂದೇಶದಡಿಯಲ್ಲಿ ಈ ಬಾರಿ ವಿಶ್ವ ಪ್ರವಾಸೋದ್ಯಮ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT