ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನೂರು | ಅಂಗಡಿಗೆ ನುಗ್ಗಿದ ಸಾರಿಗೆ ಬಸ್: ವ್ಯಕ್ತಿಗೆ ಕಾಲು ಮುರಿತ

Published 12 ಜನವರಿ 2024, 16:54 IST
Last Updated 12 ಜನವರಿ 2024, 16:54 IST
ಅಕ್ಷರ ಗಾತ್ರ

ಹನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌‌‌ಟಿಸಿ ಬಸ್ ಅಂಗಡಿಯೊಳಗೆ ನುಗ್ಗಿದ ಪರಿಣಾಮ ವ್ಯಕ್ತಿಯೊಬ್ಬರಿಗೆ ಕಾಲು ಮುರಿದಿರುವ ಘಟನೆ ಎಲ್ಲೇಮಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ಗ್ರಾಮದಲ್ಲಿ ಚಾಲಕರ ನಿಯಂತ್ರಣ ತಪ್ಪಿ ದ್ವಿ ಚಕ್ರ ವಾಹನದ ಮೇಲೆ ಕುಳಿತಿದ್ದ ಕೌದಳ್ಳಿ ಮಹೇಶ್ (31)ಎಂಬುವವನಿಗೆ ಗುದ್ದಿದೆ. ಪರಿಣಾಮ ಆತನ ಕಾಲು ಮುರಿದಿದೆ. ಕೂಡಲೆ ಅವರನ್ನು ಚಿಕಿತ್ಸೆಗೆ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಸ್ಸು ಅತಿ ವೇಗವಾಗಿ ಬಂದ ಪರಿಣಾಮ ನಿಯಂತ್ರಣಕ್ಕೆ ಸಿಗದೆ ಈ ಘಟನೆ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT