ಚಾಮರಾಜನಗರ: ಡಿಸೆಂಬರ್ ಕೊನೆಯ ವಾರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅತಿ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗಗಳಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಬೇಕು, ವಿಭಿನ್ನವಾಗಿ ಮೂಡಿ ಬರಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.

ಿಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಬುಡಕಟ್ಟು ಜನರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ ಪೂರ್ವಭಾವಿ ಸಬೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬುಡಕಟ್ಟು, ಅರಣ್ಯವಾಸಿಗಳಿಗೆ ಜಿಲ್ಲಾ ಕೇಂದ್ರದಲ್ಲಿ ಎರಡು ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಬೆಟ್ಟ ಹತ್ತುವ, ಮರ ಹತ್ತುವ ಸ್ಪರ್ಧೆ, ಮ್ಯಾರಾಥಾನ್, 100 ಮೀ ಓಟ, ಹಗ್ಗ ಜಗ್ಗಾಟ, ಕಬಡ್ಡಿ, ಲೆಮನ್ ಅಂಡ್ ಸ್ಪೂನ್, ವಾಲಿಬಾಲ್, ಇನ್ನಿತರ ಕ್ರೀಡಾ ಸ್ಪರ್ಧೆಗಳು ಇರಲಿವೆ. ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದು, ಜನಪದ ನೃತ್ಯ,ಗೀತೆ, ಗೊರುಕನ, ಪಿನಾಸಿ ನೃತ್ಯ, ಗುಬ್ಬಿ ಅಲೆಮಾರಿ ಕುಣಿತ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದರು.

ಗುಂಪು ಹಾಗೂ ವೈಯಕ್ತಿಕ ವಿಭಾಗದಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯಲಿವೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಬರುವವರಿಗೆ ಉಚಿತ ಬಸ್ ವ್ಯವಸ್ಥೆ ಮಾಡಬೇಕು. ಜಿಲ್ಲಾ ಕೇಂದ್ರದಲ್ಲಿ ಸ್ಪರ್ಧಿಗಳ ವಾಸ್ತವ್ಯಕ್ಕೆ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು, ಊಟ, ಉಪಾಹಾರ, ಕುಡಿಯುವ ನೀರು, ಇನ್ನಿತರ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕ್ರೀಡಾ ಸ್ಪರ್ಧೆಗಳು ನಡೆಯಲಿರುವ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಉದ್ಘಾಟನೆ ಶಿಷ್ಟಾಚಾರದಂತೆ ನಡೆಯಬೇಕು. ಸ್ಪರ್ಧೆಗಳಿಗೆ ತೀರ್ಪುಗಾರರನ್ನು ನಿಯೋಜಿಸಬೇಕು. ನಗದು ಬಹುಮಾನ ವಿತರಿಸಬೇಕು, ಕ್ರೀಡಾಕೂಟದಲ್ಲಿ ವೈದ್ಯಕೀಯ ವ್ಯವಸ್ಥೆ ಸೇರಿದಂತೆ ಪೊಲೀಸ್ ಭದ್ರತೆ ಇರಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಡಿಡಿಪಿಐ ಚಂದ್ರಪಾಟೀಲ್, ನಗರಸಭೆ ಪ್ರಭಾರ ಆಯುಕ್ತ ಪ್ರಕಾಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ, ಮುಖಂಡರಾದ ಸಿ.ಮಾದೇಗೌಡ, ಎಂ. ಜಡೇಸ್ವಾಮಿ, ಮಾದೇವಯ್ಯ, ಪುಟ್ಟಮ್ಮ, ಸಿ. ಮಹದೇವ, ಬಸವರಾಜು, ಜೆ. ಮಹದೇವಸ್ವಾಮಿ, ಹುಚ್ಚಯ್ಯ, ಮಹದೇವಮ್ಮ, ಸಿದ್ದಮ್ಮ, ಜಡೆಯಪ್ಪ, ಮಹದೇವಮ್ಮ, ಪುಷ್ಪಲತಾ, ಮುಖಂಡರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.