ಭಾನುವಾರ, ಏಪ್ರಿಲ್ 11, 2021
28 °C

ಕಾವೇರಿ ವನ್ಯಧಾಮದಲ್ಲಿ ಗಂಡಾನೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹನೂರು: ಕಾವೇರಿ ವನ್ಯಧಾಮದ ಕೌದಳ್ಳಿ ವನ್ಯಜೀವಿ ವಲಯದಲ್ಲಿ ಗಂಡಾನೆಯೊಂದು ಮೃತಪಟ್ಟಿದೆ.

ಆನೆಗೆ 60 ವರ್ಷವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕೌದಳ್ಳಿ ವಲಯದ ದಂಟಳ್ಳಿ ಶಾಖೆಯ ದಂಟಳ್ಳಿ ಗಸ್ತಿನ ಕುಲುಮಾವಿನ ಕೆರೆಯಲ್ಲಿ ಇದೇ ತಿಂಗಳ 1ರಂದು ನಿತ್ರಾಣಗೊಂಡ ಸ್ಥಿತಿಯಲ್ಲಿ ಗಂಡಾನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿಗೆ ಕಾಣಸಿಕ್ಕಿತ್ತು. ಸಿಬ್ಬಂದಿ ಅದರ ಮೇಲೆ ನಿಗಾ ಇಟ್ಟಿದ್ದರು. ಸೋಮವಾರ ದಂಟಳ್ಳಿ ಗಸ್ತಿನ ತಾಳಟ್ಟಿ ಅರಣ್ಯ ಪ್ರದೇಶದಲ್ಲಿ ಅದು ಮೃತಪಟ್ಟಿರುವುದು ತಿಳಿದು ಬಂದಿದೆ.

ಮಂಗಳವಾರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಂಕರಾಜು ಹಾಗೂ ವಲಯ ಅರಣ್ಯಾಧಿಕಾರಿ ವಿನಯ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಶು ವೈದ್ಯರ ಸಹಾಯದಿಂದ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು