ಗುರುವಾರ , ಆಗಸ್ಟ್ 11, 2022
21 °C

ಚಾಮರಾಜನಗರ: 12 ಹೊಸ ಪ್ರಕರಣ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 12 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಆರು ಮಂದಿ ಗುಣಮುಖರಾಗಿದ್ದಾರೆ. 

ಸಕ್ರಿಯ ಪ್ರಕರಣಗಳ ಸಂಖ್ಯೆ 107ಕ್ಕೆ ಏರಿದೆ. 51 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 12 ಮಂದಿ ಐಸಿಯುನಲ್ಲಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಕೋವಿಡ್‌ ಪ್ರಕರಣಗಳ ಸಂಖ್ಯೆ 6,451ಕ್ಕೆ ಏರಿದೆ. 6,216 ಮಂದಿ ಗುಣಮುಖರಾಗಿದ್ದಾರೆ. 

ಹೊಸ ಸಾವಿನ ಪ್ರಕರಣ ವರದಿಯಾಗಿಲ್ಲ. ಇದುವರೆಗೆ 108 ಮಂದಿ ಕೋವಿಡ್‌ನಿಂದಾಗಿ ಹಾಗೂ 20 ಮಂದಿ ಕೋವಿಡ್‌ಯೇತರ ಮಂದಿ ಮೃತಪಟ್ಟಿದ್ದಾರೆ.

ಮಂಗಳವಾರ 1,353 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,341 ಮಂದಿಯ ವರದಿ ನೆಗೆಟಿವ್‌ ಬಂದಿವೆ. 12 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.