ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 12 ಹೊಸ ಪ್ರಕರಣ, ಆರು ಮಂದಿ ಗುಣಮುಖ

Last Updated 24 ನವೆಂಬರ್ 2020, 17:06 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 12 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಆರು ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸದ್ಯ 87ಸಕ್ರಿಯ ಪ್ರಕರಣಗಳಿವೆ. 52 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದು, 14 ಮಂದಿ ಐಸಿಯುನಲ್ಲಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,276ಕ್ಕೆ ಏರಿದೆ. 6,061 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಕೋವಿಡ್‌ನಿಂದ ಹಾಗೂ ಬೇರೆ ಕಾರಣಗಳಿಂದ 20 ಮಂದಿ ಮೃತಪಟ್ಟಿದ್ದಾರೆ.

ಮಂಗಳವಾರ 1,148 ಮಂದಿಯ ಗಂಟಲು ದ್ರವದ ಮಾದರಿ ಪರೀಕ್ಷಾ ವರದಿ ಬಂದಿದ್ದು, 1,137 ಮಂದಿಯ ವರದಿ ನೆಗೆಟಿವ್‌ ಬಂದಿವೆ. 11 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT