ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 21ಕ್ಕೆ ಇಳಿದ ಕೋವಿಡ್‌ ಸಕ್ರಿಯ ಪ್ರಕರಣ

Last Updated 27 ಜನವರಿ 2021, 15:41 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಮೂರು ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಐವರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 21ಕ್ಕೆ ಇಳಿದಿದೆ. ‌

ಸಕ್ರಿಯ ಪ್ರಕರಣಗಳ ಪೈಕಿ 20 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲ.

ಜಿಲ್ಲೆಯಲ್ಲಿ ಇದುವರೆಗೆ 6,889 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಸೋಂಕು ಮುಕ್ತರಾದವರ ಸಂಖ್ಯೆ 6,737ಕ್ಕೆ ಏರಿದೆ. ಮೃತಪಟ್ಟವರ ಸಂಖ್ಯೆಯಲ್ಲಿ ವ್ಯತ್ಯಾಸವಾಗಿಲ್ಲ. ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಸಾವು ಸಂಭವಿಸಿಲ್ಲ.

ಬುಧವಾರ 512 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 519 ವರದಿಗಳು ನೆಗೆಟಿವ್ ಬಂದಿವೆ. ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಹಾಗೂ ಚಾಮರಾಜನಗರ ತಾಲ್ಲೂಕಿನ ಒಬ್ಬರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT