ಕೊಳ್ಳೇಗಾಲ: 17 ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಇಬ್ಬರನ್ನು ಗ್ರಾಮಾಂತರ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಸಂಜಯ್ (22) ಹಾಗೂ ಸುಜಿತ್ (22) ಎಂಬುವರು ಬಂಧಿತರು.

ಬಾಲಕಿಯ ತಂದೆ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಇದೇ 10ರಂದು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಸಬ್ ಇನ್‌ಸ್ಪೆಕ್ಟರ್ ಅಶೋಕ್ ನೇತೃತ್ವದ ತಂಡ ತನಿಖೆ ನಡೆಸಿದಾಗ ಸಂಜಯ್ ಹಾಗೂ ಸುಜಿತ್ ಬಾಲಕಿಯನ್ನು ಮಡಿಕೇರಿಗೆ ಕರೆದುಕೊಂಡು ಹೋಗಿರುವುದು ಗೊತ್ತಾಗಿದೆ.

ಗೋಣಿಕೊಪ್ಪ ತಾಲ್ಲೂಕಿನ ಶ್ರೀಮಂಗಲದ ಕಾಫಿ ಎಸ್ಟೇಟ್‌ವೊಂದರಲ್ಲಿ ಮೂವರೂ ಇದ್ದರು. ಅಲ್ಲಿಗೆ ತೆರಳಿದ ಪೊಲೀಸರು ಮೂವರನ್ನೂ ಕೊಳ್ಳೇಗಾಲಕ್ಕೆ ಕರೆದುಕೊಂಡು ವಿಚಾರಣೆ ನಡೆಸಿದೆ.

ವಿಚಾರಣೆಯ ಸಂದರ್ಭದಲ್ಲಿ ತಾನು ನಾಲ್ಕು ವರ್ಷಗಳಿಂದ ಸಂಜಯ್‌ನನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಹಾಗಾಗಿ, ಪೊಲೀಸರು ಆರೋಪಿಗಳ ವಿರುದ್ಧಅಪಹರಣ ಹಾಗೂ ಪೊಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಾಲಕಿಯನ್ನು ಸಾಂತ್ವನ ಕೇಂದ್ರದಲ್ಲಿರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.