ಸೋಮವಾರ, ಜೂನ್ 14, 2021
22 °C

ಅಂಬೇಡ್ಕರ್‌ ನಿಂದನೆ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಇಬ್ಬರನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

ಭ್ರಮರಾಂಬ ಬಡಾವಣೆಯ ಮಂಜುನಾಥ್‌ ಹಾಗೂ ಪ್ರೇಮ್‌ ಬಂಧಿತರು. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. 

ಅಂಬೇಡ್ಕರ್‌ ಬೀದಿಯ ನಿವಾಸಿ ನಟರಾಜು ಅವರು ನೀಡಿರುವ ದೂರಿನ ಅನ್ವಯ, ನಗರ ಪೊಲೀಸ್‌ ಠಾಣೆಯ ಅಧಿಕಾರಿಗಳು ಇಬ್ಬರ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಇಬ್ಬರನ್ನೂ ಬಂಧಿಸಿದ್ದಾರೆ. 

‘ಮಂಜುನಾಥ್‌ ಹಾಗೂ ಪ್ರೇಮ್‌ ಅವರು ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಅವಹೇಳನ ಮಾಡಿದ್ದಾರೆ ಹಾಗೂ ತಮ್ಮನ್ನೂ ನಿಂದಿಸಿದ್ದಾರೆ ಎಂದು ನಟರಾಜು ಅವರು ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಇಬ್ಬರನ್ನೂ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ’ ಎಂದು ಠಾಣೆಯ ಇನ್‌ಸ್ಪೆಕ್ಟರ್‌ ಮಹೇಶ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.