ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎರಡು ಬೈಕ್ ಮುಖಾಮುಖಿ ಡಿಕ್ಕಿ: ವ್ಯಕ್ತಿ ಸಾವು

Published 1 ಸೆಪ್ಟೆಂಬರ್ 2024, 16:56 IST
Last Updated 1 ಸೆಪ್ಟೆಂಬರ್ 2024, 16:56 IST
ಅಕ್ಷರ ಗಾತ್ರ

ಕೊಳ್ಳೇಗಾಲ: ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಭಾನುವಾರ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ತಾಲ್ಲೂಕಿನ ಸಿಂಗನಲ್ಲೂರು ಗ್ರಾಮದ ರಾಚಪ್ಪ ( 33) ಸ್ಥಳದಲ್ಲೇ ಮೃತಪಟ್ಟರು.

ನಗರದ ನೂರ್ ಮೊಹಲ್ಲಾ ಬಡಾವಣೆಯ ನಿವಾಸಿ ಸೈಯದ್ ಇರ್ಫಾನ್ ಹಾಗೂ ಸೈಯದ್ ಸುಹೇಲ್ ಗಾಯಗೊಂಡಿದ್ದಾರೆ.

 ರಾಜಪ್ಪ ಕೊಳ್ಳೇಗಾಲದಿಂದ ಕೆಲಸ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ನಗರದ ನೂರ್ ಮೊಹಲ್ಲ ಬಡಾವಣೆ ಯುವಕರು ಮಧುವನಹಳ್ಳಿ ಗ್ರಾಮದಿಂದ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಗಾಯಾಳುಗಳನ್ನು ಸಾರ್ವಜನಿಕರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT