ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಬಾಲಕಿ ಮೇಲೆ ಅತ್ಯಾಚಾರ: ಇಬ್ಬರಿಗೆ 20 ವರ್ಷಗಳ ಕಠಿಣ ಶಿಕ್ಷೆ

Published 19 ಏಪ್ರಿಲ್ 2024, 14:00 IST
Last Updated 19 ಏಪ್ರಿಲ್ 2024, 14:00 IST
ಅಕ್ಷರ ಗಾತ್ರ

ಚಾಮರಾಜನಗರ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಯುವಕರಿಗೆ ಜಿಲ್ಲಾ ಮಕ್ಕಳ ಸ್ನೇಹಿ ಹಾಗೂ ಜಿಲ್ಲಾ  ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. 

ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಮಹೇಶ್‌ ಪ್ರಸಾದ್‌ (32) ಮತ್ತು ವೆಂಕಟಯ್ಯನಛತ್ರ ಗ್ರಾಮದ ಸಿದ್ದಮಲ್ಲು (28) ಶಿಕ್ಷೆಗೆ ಗುರಿಯಾದವರು. 

ಬಾಲಕಿಯನ್ನು ಪ್ರೀತಿಸುತ್ತಿದ್ದ ಸಿದ್ದಮಲ್ಲು, ಮದುವೆಯಾಗುವುದಾಗಿ ಆಕೆಯನ್ನು ಪುಸಲಾಯಿಸಿ ಅಪಹರಣ ಮಾಡಿ ಅತ್ಯಾಚಾರ ಎಸಗಿದ್ದ. ಪ್ರಕರಣದ ಒಂದನೇ ಆರೋಪಿ ಮಹೇಶ್‌ ಪ್ರಸಾದ್‌ ವಿವಾಹಿತನಾಗಿದ್ದ. ಸಿದ್ದಮಲ್ಲು ಬಾಲಕಿಯನ್ನು ಪ್ರೀತಿಸುತ್ತಿರುವ ವಿಚಾರ ತನಗೆ ತಿಳಿದಿರುವುದಾಗಿ ಬಾಲಕಿಯನ್ನು ಹೆದರಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. 

ಆರೋಪಗಳು ಸಾಬೀತಾದ ಕಾರಣ ಜಿಲ್ಲಾ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎನ್‌.ಆರ್.ಲೋಕಪ್ಪ ಅವರು ಇಬ್ಬರಿಗೂ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ಜೊತೆಗೆ ತಲಾ ₹55 ಸಾವಿರ ದಂಡವನ್ನೂ ವಿಧಿಸಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸಂತ್ರಸ್ತ ಬಾಲಕಿಗೆ ‌₹4 ಲಕ್ಷ ಹಣವನ್ನು ತಿಂಗಳ ಒಳಗಾಗಿ ಪರಿಹಾರ ರೂಪದಲ್ಲಿ ನೀಡಬೇಕು ಎಂದು ಅವರು ಆದೇಶದಲ್ಲಿ ಹೇಳಿದ್ದಾರೆ. 

ಪ್ರಾಸಿಕ್ಯೂಷನ್‌ ಪರವಾಗಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೆ.ಯೋಗೇಶ್‌ ವಾದ ಮಂಡಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT