ಭಾನುವಾರ, ಅಕ್ಟೋಬರ್ 24, 2021
21 °C

ಚಾಮರಾಜನಗರ: ಎರಡು ಕೋವಿಡ್‌ ಪ್ರಕರಣ, ಐವರು ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಇಬ್ಬರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ.  ಐವರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸೋಂಕಿತರ ಸಂಖ್ಯೆ 28ಕ್ಕೆ ಇಳಿದಿದೆ. 16 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಐಸಿಯೂನಲ್ಲಿ ಯಾರೂ ಇಲ್ಲ.  ಇದುವರೆಗೆ ಜಿಲ್ಲೆಯಲ್ಲಿ 32,514 ಪ್ರಕರಣಗಳು ವರದಿಯಾಗಿವೆ. 31,948 ಮಂದಿ ಗುಣಮುಖರಾಗಿದ್ದಾರೆ.

ಬುಧವಾರ 2,513 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2,511 ವರದಿಗಳು ನೆಗೆಟಿವ್‌ ಬಂದಿವೆ. ಕೊಳ್ಳೇಗಾಲ ಮತ್ತು ಯಳಂದೂರು ತಾಲ್ಲೂಕಿನ ತಲಾ ಒಬ್ಬರಿಗೆ ಕೋವಿಡ್‌ ಇರುವುದು ಖಚಿತವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.