ಸೋಮವಾರ, ಮಾರ್ಚ್ 27, 2023
29 °C

ಇಬ್ಬರಿಗೆ ಕೋವಿಡ್, ಇಬ್ಬರು ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 987 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು ಒಬ್ಬರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಜಿಲ್ಲೆಯ ಇನ್ನೊಬ್ಬರಿಗೆ ಸೋಂಕು ತಗುಲಿರುವುದು ಮೈಸೂರಿನಲ್ಲಿ ದೃಢಪಟ್ಟಿದೆ. ಹಾಗಾಗಿ ಜಿಲ್ಲೆಯ ಎರಡು ಪ್ರಕರಣಗಳು ವರದಿಯಾದಂತಾಗಿದೆ.

ಶನಿವಾರ ಇಬ್ಬರು ಸೋಂಕುಮುಕ್ತರಾಗಿದ್ದಾರೆ. ಸಾವು ಸಂಭವಿಸಿಲ್ಲ. ಸಕ್ರಿಯ ಪ್ರಕರಣಗಳು ಮೂರಕ್ಕೆ ಇಳಿದಿವೆ.  ಒಬ್ಬರು ಆಸ್ಪತ್ರೆಯಲ್ಲಿದ್ದು, ಇಬ್ಬರು ಹೋಂ ಐಸೊಲೇಷನ್‌ನಲ್ಲಿದ್ದಾರೆ. 

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,563ಕ್ಕೆ ಏರಿದೆ.  32,021 ಮಂದಿ ಗುಣಮುಖರಾಗಿದ್ದಾರೆ.

ದೀಪಾವಳಿ ದಿನವಾದ ಶುಕ್ರವಾರ ಜಿಲ್ಲೆಯಲ್ಲಿ ಒಂದೂ ಪ್ರಕರಣ ವರದಿಯಾಗಿರಲಿಲ್ಲ. ಮೂವರು ಗುಣಮುಖರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು