ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಮುಂದುವರಿದ ಸಾವಿನ ಸರಣಿ

Last Updated 11 ಜುಲೈ 2021, 16:08 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಸಾವಿನ ಸರಣಿ ಮುಂದುವರಿದಿದೆ. ಭಾನುವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ. 40 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. 43 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಸದ್ಯ 435 ಸೋಂಕಿತರಿದ್ದಾರೆ. 27 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿದ್ದಾರೆ. 21 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31,353 ಹಾಗೂ ಗುಣಮುಖರಾದವರ ಸಂಖ್ಯೆ 30,401ಕ್ಕೆ ಏರಿದೆ.

ಭಾನುವಾರ 1,397 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,352 ವರದಿಗಳು ನೆಗೆಟಿವ್‌ ಬಂದು, 45 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಜಿಲ್ಲಾಡಳಿತವು 35 ಪ್ರಕರಣಗಳನ್ನು ವರದಿಯಲ್ಲಿ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT