ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಇಬ್ಬರು ಸಾವು, 65 ಹೊಸ ಪ್ರಕರಣ

Last Updated 17 ಅಕ್ಟೋಬರ್ 2020, 13:11 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಶನಿವಾರವೂ ಇಬ್ಬರು ಮೃತಪಟ್ಟಿದ್ದಾರೆ. 65 ಹೊಸ ಪ್ರಕರಣಗಳು ದೃಢಪಟ್ಟಿವೆ. 62 ಮಂದಿ ಗುಣಮುಖರಾಗಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿಯ 75 ವರ್ಷದ ವೃದ್ಧ ಅ.10ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಹರವೆ ಗ್ರಾಮದ 62 ವರ್ಷದ ಮಹಿಳೆ ಅ.10 ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಕೊನೆಯುಸಿರೆಳೆದಿದ್ದಾರೆ.

ಮೂರು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಕೋವಿಡ್‌ನಿಂದಾಗಿ ಮೃತಪಟ್ಟವರ ಸಂಖ್ಯೆ 84ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 30 ಮಂದಿ ಕೊನೆಯುಸಿರೆಳೆದಿದ್ದಾರೆ.

ಶನಿವಾರದ 65 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 5,390 ಪ್ರಕರಣಗಳು ದೃಢಪಟ್ಟಿವೆ. 4,480 ಮಂದಿ ಗುಣಮುಖರಾಗಿದ್ದಾರೆ. 796 ಮಂದಿ ಸೋಂಕುನಿಂದ ಬಳಲುತ್ತಿದ್ದಾರೆ. ಈ ಪೈಕಿ 227 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 46 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ 993 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 929 ಮಂದಿಯ ನೆಗೆಟಿವ್‌ ಬಂದಿವೆ. 64 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT