ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ನಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. 94 ಹೊಸ ಪ್ರಕರಣಗಳು ದೃಢಪಟ್ಟಿವೆ. 73 ಮಂದಿ ಗುಣಮುಖರಾಗಿದ್ದಾರೆ.

ತಾಲ್ಲೂಕಿನ ಆಲೂರು ಗ್ರಾಮದ 68 ವರ್ಷದ ಪುರುಷ ಅ.4ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸಿದೆ ಗುರುವಾರ ಮೃತಪಟ್ಟಿದ್ದಾರೆ.

ಅ.9ರಂದು ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಬಲಚವಾಡಿಯ 80 ವರ್ಷದ ವೃದ್ಧ ಗುರುವಾರ ನಿಧನರಾಗಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಮೃತಪಟ್ಟವರ ಸಂಖ್ಯೆ 80ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 30 ಮಂದಿ ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಮೃತಪಟ್ಟ ಸೋಂಕಿತರ ಸಂಖ್ಯೆ 110ಕ್ಕೆ ತಲುಪಿದೆ.

ಹೊಸ 94 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 5,245 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈವರೆಗೆ 4,363 ಮಂದಿ ಗುಣಮುಖರಾಗಿದ್ದಾರೆ. 772 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 200 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 43 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಕೋವಿಡ್ ಆಸ್ಪತ್ರೆಗಳು ಹಾಗೂ ಕೇರ್ ಕೇಂದ್ರದಲ್ಲಿದ್ದಾರೆ.

ಗುರುವಾರ 1,209 ಗಂಟಲು ದ್ರವದ ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, 1,118 ವರದಿಗಳು ನೆಗೆಟಿವ್ ಬಂದಿವೆ. 91 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಎರಡು ಪ್ರಕರಣಗಳು ಮೈಸೂರಿನಲ್ಲಿ ಹಾಗೂ ಇನ್ನೊಂದು ಪ್ರಕರಣ ಬೆಂಗಳೂರಿನಲ್ಲಿ ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.