ಚಾಮರಾಜನಗದರಲ್ಲಿ ಇಬ್ಬರು ಸಾವು, 58 ಹೊಸ ಪ್ರಕರಣಗಳು, 54 ಮಂದಿ ಗುಣಮುಖ

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 58 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. 54 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.
ಯಳಂದೂರು ಪಟ್ಟಣದ ನಿವಾಸಿ 63 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ–4,69,321) ಸೆ.12ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಮೃತಪಟ್ಟಿದ್ದಾರೆ. ಹನೂರು ಪಟ್ಟಣದ 41 ವರ್ಷದ ಪುರುಷ (4,76,997) ಸೆ.11ರಂದು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಾಗುವ ಮೊದಲೇ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ನಂತರ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.
ಸೋಮವಾರದ ಅಂಕಿ ಅಂಶಗಳು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 3,076 ಪ್ರಕರಣಗಳು ದೃಢಪಟ್ಟಿವೆ. 2,403 ಮಂದಿ ಸೋಂಕು ಮುಕ್ತರಾಗಿದ್ದಾರೆ. 66 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಪೈಕಿ 47 ಮಂದಿ ಕೋವಿಡ್‌ನಿಂದಾಗಿಯೇ ಅಸುನೀಗಿದ್ದಾರೆ. 19 ಮಂದಿ ಕೋವಿಡ್ ಯೇತರ ಕಾರಣಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. 608 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 261 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 35 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಡಿಮೆ ಪರೀಕ್ಷೆ: ಸೋಮವಾರ 350 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆರ್‌ಟಿಪಿಸಿಆರ್ ಮೂಲಕ 117, ರ‍್ಯಾಪಿಡ್ ಆ್ಯಂಟಿಜೆನ್ ಕಿಟ್ ಮೂಲಕ 215, ಟ್ರು ನಾಟ್ ವಿಧಾನದಲ್ಲಿ 18 ಪರೀಕ್ಷೆಗಳನ್ನು ನಡೆಸಲಾಗಿದೆ. 294 ಮಂದಿಯ ವರದಿ ನೆಗೆಟಿವ್ ಬಂದಿವೆ. 56 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಇನ್ನೆರಡು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.