ಬುಧವಾರ, ಆಗಸ್ಟ್ 17, 2022
27 °C

ಚಾಮರಾಜನಗರ‌: ಇಬ್ಬರು ಸಾವು, 14 ಹೊಸ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ. ಶುಕ್ರವಾರವಷ್ಟೇ ಒಬ್ಬರು ಮೃತಪಟ್ಟಿದ್ದರು. ನವೆಂಬರ್‌ ಎರಡನೇ ವಾರದಿಂದ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಸಾವು ಸಂಭವಿಸಿರಲಿಲ್ಲ. 

ತಾಲ್ಲೂಕಿನ ಆಲೂರು ಗ್ರಾಮದ 60 ವರ್ಷದ ವ್ಯಕ್ತಿಯೊಬ್ಬರು ಇದೇ 15ರಂದು ನಗರದ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ. ತಾಲ್ಲೂಕಿನ ಕುಲಗಾಣದ ನಿವಾಸಿ 70 ವರ್ಷದ ವೃದ್ಧೆ 16ರಂದು ಆಸ್ಪತ್ರೆಗೆ ದಾಖಲುಗೊಂಡಿದ್ದರು. ಅವರು ಕೂಡ ಭಾನುವಾರ ಮೃತಪಟ್ಟಿದ್ದಾರೆ. 

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 111ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 20 ಮಂದಿ ನಿಧನರಾಗಿದ್ದಾರೆ. 

ಭಾನುವಾರ 14 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 13 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಈವರೆಗಿನ ಪ್ರಕರಣಗಳ ಸಂಖ್ಯೆ 6,638ಕ್ಕೆ ಏರಿದೆ. 6,400 ಮಂದಿ ಸೋಂಕು ಮುಕ್ತರಾಗಿದ್ದಾರೆ. 107 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 60 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಐವರು ಐಸಿಯುನಲ್ಲಿದ್ದಾರೆ.

ಭಾನುವಾರ 771 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 760 ಮಂದಿಯ ವರದಿ ನೆಗೆಟಿವ್‌ ಬಂದಿವೆ. 11 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಮೂರು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು