ಚಾಮರಾಜನಗರ: ನಗರದ ನಂಜನಗೂಡು ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಗೆ ಜಲ್ಲಿ ತುಂಬಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಚಾಲಕ, ಹನೂರು ತಾಲ್ಲೂಕಿನ ಚಿಂಚಹಳ್ಳಿ ಗ್ರಾಮದ ಸುದೇಶ್ (30) ಹಾಗೂ ಟಿಪ್ಪರ್ ಮಾಲೀಕ ಹನೂರಿನ ಆರ್.ಎಸ್.ದೊಡ್ಡಿಯ ಮಹದೇವಪ್ಪ ಅವರ ಮಗ ಲೋಕೇಶ್ (23) ಮೃತಪಟ್ಟವರು.

ರಸ್ತೆ ನಿರ್ಮಾಣಕ್ಕಾಗಿ ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಜಲ್ಲಿ ತುಂಬಿಕೊಂಡಿದ್ದ ಟಿಪ್ಪರ್, ನಗರದ ಮೂಡ್ಲುಪುರ ಬಡಾವಣೆಯಿಂದ ಆರಂಭವಾಗುವ ಬೈಪಾಸ್ ರಸ್ತೆ ಮೂಲಕ ನಂಜನಗೂಡು ಮುಖ್ಯರಸ್ತೆ ಮಾರ್ಗದಲ್ಲಿ ಹನೂರಿಗೆ ತೆರಳುತ್ತಿತ್ತು.

ಈ ವೇಳೆ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಮೇಲ್ಸೇತುವೆ ಗೋಡೆಗೆ ಡಿಕ್ಕಿ ಹೊಡೆಯಿತು. ಟಿಪ್ಪರ್ ನ ಮುಂಭಾಗ ನಜ್ಜು ಗುಜ್ಜಾಗಿದ್ದು, ಅದರಲ್ಲಿದ್ದ ಸುದೇಶ್ ಹಾಗೂ ಲೋಕೇಶ್ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸಂಚಾರ ಠಾಣೆ ಸಬ್ ಇನ್ ಸ್ಪೆಕ್ಟರ್ ನಂದೀಶ್ ಕುಮಾರ್, ಪಟ್ಟಣ ಠಾಣೆ ಇನ್ ಸ್ಪೆಕ್ಟರ್ ಮಹೇಶ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.