ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಕೋವಿಡ್‌ನಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. 73 ಹೊಸ ಪ್ರಕರಣಗಳು ದೃಢಪಟ್ಟಿವೆ. 42 ಮಂದಿ ಗುಣಮುಖರಾಗಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದ ನಿವಾಸಿ 35 ವರ್ಷದ ಪುರುಷ ಸೆ.30ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಸಂತೇಮರಹಳ್ಳಿಯ 93 ವರ್ಷದ ವೃದ್ಧ ಸೆ.28ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ನಿಂದಾಗಿ ಮೃತಪಟ್ಟವರ ಸಂಖ್ಯೆ 70ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 28 ಮಂದಿ ನಿಧನರಾಗಿದ್ದಾರೆ. ಒಟ್ಟಾರೆಯಾಗಿ ಮೃತಪಟ್ಟ ಕೊರೊನಾ ಸೋಂಕಿತರ ಸಂಖ್ಯೆ 100ರ ಸನಿಹಕ್ಕೆ (98) ಬಂದಿದೆ.

ಭಾನುವಾರ 73 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ವರದಿಯಾಗಿರುವ ಪ್ರಕರಣಗಳ ಸಂಖ್ಯೆ 4,415ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 3,434ಕ್ಕೆ ಹಿಗ್ಗಿದೆ. 883 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 392 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 38 ಮಂದಿ ಇದ್ದಾರೆ. ಉಳಿದವರು ಕೋವಿಡ್ ಆಸ್ಪತ್ರೆ ಹಾಗೂ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ 761 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. 626 ಪರೀಕ್ಷೆಗಳನ್ನು ಆರ್‌ಟಿಪಿಸಿಆರ್ ವಿಧಾನದಲ್ಲಿ, 135 ಪರೀಕ್ಷೆಗಳನ್ನು ರ‍್ಯಾಪಿಡ್ ಆ್ಯಂಟಿಜೆನ್ ಕಿಟ್ ಮೂಲಕ ನಡೆಸಲಾಗಿದೆ. 689 ಮಂದಿಯ ವರದಿ ನೆಗೆಟಿವ್ ಬಂದಿವೆ. 72 ಮಂದಿಗೆ ಸೋಂಕು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.