ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಮತ್ತೆ ಇಬ್ಬರು ಸಾವು, 80 ಕೋವಿಡ್‌ ಪ್ರಕರಣಗಳು ದೃಢ

Last Updated 16 ಅಕ್ಟೋಬರ್ 2020, 15:37 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್‌ನಿಂದಾಗಿ ಮತ್ತಿಬ್ಬರು ಮೃತಪಟ್ಟಿದ್ದಾರೆ. 80 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 55 ಮಂದಿ ಗುಣಮುಖರಾಗಿದ್ದಾರೆ.

ನಗರದ 75 ವರ್ಷದ ವೃದ್ಧರೊಬ್ಬರು ಅ.10ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ಮೃತಪಟ್ಟಿದ್ದಾರೆ. ನಗರದವರೇ ಆದ ಮತ್ತೊಬ್ಬ 75 ವರ್ಷದ ವೃದ್ಧ ಅ.13ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಶುಕ್ರವಾರ ನಿಧನರಾಗಿದ್ದಾರೆ.

ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 82ಕ್ಕೆ ಏರಿದೆ. 30 ಮಂದಿ ಕೋವಿಡ್‌ಯೇತರ ಕಾರಣದಿಂದ ನಿಧನರಾಗಿದ್ದಾರೆ.

ಶುಕ್ರವಾರದ 80 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 5,325 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. 4,418 ಮಂದಿ ಸೋಂಕು ಮುಕ್ತರಾಗಿದ್ದಾರೆ. 795 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 211 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 47 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ 998 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 919 ಮಂದಿಯ ವರದಿ ನೆಗೆಟಿವ್‌ ಬಂದಿದೆ. 79 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಮೈಸೂರಿನಲ್ಲಿ ಒಂದು ಪ್ರಕರಣ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT