ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 2,037 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ಇಬ್ಬರಿಗೆ ಮಾತ್ರ ಸೋಂಕು ಖಚಿತವಾಗಿ ಉಳಿದವರೆಲ್ಲ ವರದಿಗಳು ನೆಗೆಟಿವ್ ಬಂದಿವೆ. 10 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.
ಸೋಂಕುಮುಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 70ಕ್ಕೆ ಇಳಿದಿದೆ. ಒಬ್ಬರು ಐಸಿಯುನಲ್ಲಿದ್ದಾರೆ. 21 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಜಿಲ್ಲೆಯಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 32,361ಕ್ಕೆ ಏರಿದೆ. 31,754 ಮಂದಿ ಗುಣಮುಖರಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.