ಹನೂರು (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಗಸ್ತಿನ ಹೊಳೆ ವ್ಯಾಪ್ತಿಯ ಮುರದಟ್ಟಿ ಕಿರುಬನಕಲ್ಲು ಗುಡ್ಡದಲ್ಲಿ ಎರಡು ಹುಲಿ ಮರಿ ಮೃತಪಟ್ಟಿವೆ.

ಸೋಮವಾರ ಗಂಡು ಹುಲಿಮರಿ ಕಳೇಬರ ಸಿಕ್ಕಿತ್ತು. ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶು ವೈದ್ಯಾಧಿಕಾರಿಗಳ ತಂಡ ಕೂಂಬಿಂಗ್ ನಡೆಸಿದಾಗ 50 ಮೀಟರ್ ದೂರದ ಗುಹೆಯೊಂದರ ಬಳಿ ಮತ್ತೊಂದು ಹೆಣ್ಣು ಹುಲಿಮರಿ ಕಳೇಬರ ದೊರಕಿತು.

‘ಇವು 15 ದಿನ ಅವಧಿಯವು. ತಾಯಿಯಿಂದ ಬೇರ್ಪಟ್ಟು ಹಸಿವಿನಿಂದ ಸತ್ತಿರುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 26ರಂದು ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಬಳಿ ಐದು ಹುಲಿಗಳು ವಿಷಪ್ರಾಷನದಿಂದ ಮೃತಪಟ್ಟಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.