ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಂಜೀವಿನಿ-ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆದ ಯುವಜನತೆಗೆ ಸಂಸದ ಸುನೀಲ್ ಬೋಸ್ ಜಿಲ್ಲಾ ಪಂಚಾಯಿಸಿ ಸಭಾಂಗಣದಲ್ಲಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಉದ್ಯೋಗ ಮೇಳಕ್ಕೆ ಆನ್ಲೈನ್ನಲ್ಲಿ 668, ಆಫ್ಲೈನ್ನಲ್ಲಿ 602 ಅಭ್ಯರ್ಥಿಗಳು ಸೇರಿ 1,290 ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು. 495 ಪುರುಷರು, 790 ಮಹಿಳೆಯರು ಭಾಗವಹಿಸಿದ್ದ ಮೇಳದಲ್ಲಿ 85 ಪುರುಷರು ಹಾಗೂ 108 ಮಹಿಳೆಯರು ಉದ್ಯೋಗಕ್ಕೆ ಆಯ್ಕೆಯಾದರು. ಮೇಳದಲಿ 101 ಉದ್ಯೋಗದಾತ ಕಂಪನಿಗಳು ಭಾಗವಹಿಸಿದ್ದವು. 190 ಪುರುಷರು, 290 ಮಹಿಳೆಯರು ಸೇರಿದಂತೆ 480 ಅಭ್ಯರ್ಥಿಗಳು ಉದ್ಯೋಗಕ್ಕಾಗಿ 2ನೇ ಹಂತದಲ್ಲಿ ನಡೆಯುವ ಸಂದರ್ಶನಕ್ಕೆ ಆಯ್ಕೆಯಾದರು.

ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ಚಂದ್ರು ಉದ್ಘಾಟಿಸಿ ಮಾತನಾಡಿ, ನಿರುದ್ಯೋಗಿ ಯುವಜನಎ ಸ್ವಾವವಲಂಬಿ ಬದುಕು ಕಟ್ಟಿಕೊಳ್ಳಲು ಉದ್ಯೋಗ ಮೇಳ ಸಹಕಾರಿಯಾಗಿದ್ದು ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಪ್ರತಿಯೊಬ್ಬರಿಗೂ ಸರ್ಕಾರಿ ಉದ್ಯೋಗ ಸಿಗುವುದಿಲ್ಲ, ಆದರೆ, ಖಾಸಗಿ ಕ್ಷೇತ್ರಗಳಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಮಾತನಾಡಿ, ಕಳೆದ ವರ್ಷದ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಲಭಿಸಿತ್ತು. ಈ ಬಾರಿ 100ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದು ಕಳೆದ ಬಾರಿಗಿಂತಲೂ ಹೆಚ್ಚು ಅಭ್ಯರ್ಥಿಗಳಿಗೆ ಉದ್ಯೋಗ ದೊರೆಯುವ ನಿರೀಕ್ಷೆಗಳಿವೆ ಎಂದರು.

ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ ಡಿ.ಸಿ, ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.