ಸಂತೇಮರಹಳ್ಳಿ: ಸಮೀಪದ ಉಮ್ಮತ್ತೂರು ಗ್ರಾಮದಲ್ಲಿ ಶುಕ್ರವಾರ ಬಸವೇಶ್ವರ ಜಯಂತಿ ಅಂಗವಾಗಿ ಮೆರವಣಿಗೆ ನಡೆಸಲಾಯಿತು.

ಗ್ರಾಮದ ಮಠದ ಮುಂಭಾಗ ಪಲ್ಲಕ್ಕಿಯಲ್ಲಿ ಬಸವೇಶ್ವರ ಭಾವಚಿತ್ರವನ್ನು ಇರಿಸಿ ಪೂಜೆ ಸಲ್ಲಿಸಲಾಯಿತು. ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಮೂಡ್ಲುಪುರ ನಂದೀಶ್, ಮೇಲಾಜಿಪುರ ಮಠದ ನಾಗೇಂದ್ರ ಸ್ವಾಮೀಜಿ ಹಾಗೂ ಮಹದೇವಸ್ವಾಮಿ ಬಸವೇಶ್ವರ ವಿಗ್ರಹಕ್ಕೆ ಪೂಷ್ಬಾರ್ಚನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ನಂದಿಧ್ವಜ, ನಾದಸ್ವರ, ನಗಾರಿ ಹಾಗೂ ವಾದ್ಯ ಮೇಳಗಳೊಂದಿಗೆ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮನೆ ಮನೆಗಳಲ್ಲಿ ಬಸವೇಶ್ವರ ಮೂರ್ತಿಗೆ ಪೂಜೆ ಸಲ್ಲಿಸಲಾಯಿತು. ನಂತರ ಗ್ರಾಮದ ಹೊರ ಭಾಗದಲ್ಲಿರುವ ಬಸವೇಶ್ವರ ಪುತ್ಥಳಿ ಮುಂಭಾಗ ಮೆರವಣಿಗೆ ಕೊನೆಗೊಳಿಸಿ ಅನ್ನ ಸಂತರ್ಪಣೆ ನಡೆಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-37-1488006324

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.