ಕೊಳ್ಳೇಗಾಲ: ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಕನಕಗಿರಿ ರಸ್ತೆ ಅಭಿವೃದ್ಧಿಪಡಿಸದೇ ನಿರ್ಲಕ್ಷ್ಯ ವಹಿಸಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಶುಕ್ರವಾರ ಕಚೇರಿ ಮುಂದೆ ದಿಢೀರ್ ಪ್ರತಿಭಟನೆ ನಡೆಸಿತು.

ನಗರದ ಲೋಕೋಪಯೋಗಿ ಇಲಾಖೆಯ ಮುಂಭಾಗದಲ್ಲಿ ಜಮಾಯಿಸಿದ್ದ ರೈತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಶೈಲೇಂದ್ರ ಮಾತನಾಡಿ, ಕನಕಗಿರಿ ರಸ್ತೆ ಅಭಿವೃದ್ಧಿ ಪಡಿಸುವಂತೆ ಕಳೆದ ನವೆಂಬರ್ನಲ್ಲಿ ಪ್ರತಿಭಟನೆ ನಡೆಸಿದಾಗ ಒಂದು ತಿಂಗಳೊಳಗೆ ಅಭಿವೃದ್ಧಿ ಪಡಿಸುವುದಾಗಿ ಹೇಳಿ ಹೋದ ಅಧಿಕಾರಿಗಳು ಇದುವರೆಗೂ ಕಾಮಗಾರಿ ನಡೆಸದೇ ಸುಮ್ಮನೆ ಕುಳಿತಿದ್ದಾರೆ. ಆ ರಸ್ತೆಯಲ್ಲಿ ಮಾ.6ರಂದು ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದ ದೊಡ್ಡಿಂದುವಾಡಿ ಗ್ರಾಮದ ರೈತ ರಾಜಣ್ಣ ಅವರಿಗೆ ಎದುರುಗಡೆ ಹೋಗುತ್ತಿದ್ದ ವಾಹನದ ಟೈರ್ ಸಿಲುಕಿದ ಚಿಕ್ಕ ಕಲ್ಲು ಸಿಡಿದು ಅವರ ಕಾಲಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದರು.

ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿರುವ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್ ಅವರನ್ನು ಅಮಾನತು ಮಾಡಬೇಕು. ಅವರು ಬರೀ ಸುಳ್ಳು ಹೇಳಿಕೊಂಡೆ ಕಾಲ ಕಳೆಯುತ್ತಿದ್ದಾರೆ ಎಂದು ಪಟ್ಟು ಹಿಡಿದರು. ಜೊತೆಗೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಬ್ಲಾಕ್ ಪಟ್ಟಿಯಲ್ಲಿಡಬೇಕು ಎಂದು ಒತ್ತಾಯಿಸಿದರು.

ನಂತರ ಎಇಇ ಪುರುಷೋತ್ತಮ್ ಮಾತನಾಡಿ, ಕನಕಗಿರಿ ರಸ್ತೆಯ ಕಾಮಗಾರಿಯನ್ನು ಸೋಮವಾರದಿಂದ ಆರಂಭ ಮಾಡಿಸುತ್ತೇವೆ. ಈಗ ಪ್ರತಿಭಟನೆಯನ್ನು ಕೈಬಿಡಿ ಎಂದು ಮನವಿ ಮಾಡಿದರು. ಸೋಮವಾರ ಕೆಲಸ ಆರಂಭವಾಗದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಪ್ರತಿಭಟನೆಯನ್ನು ಕೈಬಿಟ್ಟರು.

ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪೆರಿಯಾನಾಯಗಂ, ದೊಡ್ಡಿಂದುವಾಡಿ ಗ್ರಾಮ ಘಟಕ ಅಧ್ಯಕ್ಷ ವಸಂತಕುಮಾರ್, ಸಿಂಗನಲ್ಲೂರು ಗ್ರಾಮ ಘಟಕ ಬೆಟ್ಟೇಗೌಡ, ಬಸವಲಿಂಗಶೆಟ್ಟಿ, ರಂಗಸ್ವಾಮಿ, ರಾಜು, ಗೋವಿಂದರಾಜು, ನಾಗೇಂದ್ರ, ವೆಂಕಟೇಶ್, ಕೃಷ್ಣಶೆಟ್ಟಿ, ರವಿ, ಕೀರ್ತಿ, ನಾಗೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.