ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಮೊದಲು ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ ಆಧಾರದ ಮೇಲೆ ‘ಡಿ’ ಗ್ರೂಪ್ ನೌಕರಿ ನೀಡಲಾಗಿತ್ತು. ಬಳಿಕ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧನಾ ಆಸ್ಪತ್ರೆಯಲ್ಲಿ (ಸಿಮ್ಸ್) ಕೆಲಸ ಮಾಡುವಂತೆ ಆದೇಶಿಸಲಾಯಿತು. ಆಸ್ಪತ್ರೆಯ ವಾತಾವರಣದಲ್ಲಿ ಕೆಲಸ ಮಾಡಲು ಒಪ್ಪದ ಹಲವರು ಕೆಲಸಕ್ಕೆ ಹಾಜರಾಗಲಿಲ್ಲ.