ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಪೃಶ್ಯತೆ ಆಚರಣೆ: ವರದಿ ಕೇಳಿದ ಡಿ.ಸಿ

Last Updated 5 ಅಕ್ಟೋಬರ್ 2020, 18:47 IST
ಅಕ್ಷರ ಗಾತ್ರ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ‘ವಿದ್ಯಾಗಮ’ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ ಆಚರಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವರದಿ ನೀಡಲು, ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದ್ದಾರೆ.

ನೋಟಿಸ್‌: ‘ಘಟನೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಪ್ರಾಥಮಿಕ ವರದಿ ಸಲ್ಲಿಸಿದ್ದು, ಚಿಕ್ಕಾಟಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ನೋಟಿಸ್‌ ನೀಡಿದ್ದಾರೆ. ಈ ಘಟನೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಶಿಕ್ಷಕರು ತಪ್ಪಿತಸ್ಥರು ಎಂದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು’ ಎಂದು ಡಿಡಿಪಿಐ ಜವರೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT