ಮಂಗಳವಾರ, ಮಾರ್ಚ್ 21, 2023
25 °C

ಗೋಮೂತ್ರದಿಂದ ನೀರಿನ ಟ್ಯಾಂಕ್ ಶುದ್ಧೀಕರಣ: ವರದಿ ಬಂದ ನಂತರ ಕ್ರಮ- ವಿ.ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ  ನೀರು ಸರಬರಾಜು ಟ್ಯಾಂಕ್ ನೀರು ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ತರಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಶನಿವಾರ ಸಂಜೆ ಮಾಹಿತಿ ಸಿಕ್ಕಿತು. ತಕ್ಷಣವೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿದ್ದೇನೆ. ಜಿಲ್ಲಾಧಿಕಾರಿ ಗಮನಕ್ಕೂ ತಂದಿದ್ದೇನೆ. ವಾಸ್ತವಾಂಶ ಏನುಬೆಂಬುದು ಗೊತ್ತಿಲ್ಲ. ಈ ಬಗ್ಗೆ ಅಧಿಕಾರಿಗಳಿಂದ ವರದಿ ತರಿಸುತ್ತೇನೆ’ ಎಂದರು.

'ಇದು ನೋವಿನ ಸಂಗತಿ. ಇಂತಹದ್ದು ನಡೆಯಬಾರದು. ಎಲ್ಲರೂ ಒಂದೇ ತಕ್ಕಡಿಯಲ್ಲಿ ಬದುಕಬೇಕಾಗುತ್ತದೆ' ಎಂದರು.

ಓದಿ... ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್‌ ಖಾಲಿ ಮಾಡಿದರು!

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು