ಬುಧವಾರ, ಮೇ 27, 2020
27 °C
ತಾಲ್ಲೂಕುಗಳಲ್ಲೂ ಸಂಚಾರಿ ತರಕಾರಿ ವಾಹನ: ಶನಿವಾರದಿಂದ ಆರಂಭ–ಡಿ.ಸಿ ಹೇಳಿಕೆ

ಚಾಮರಾಜನಗರ: ಮನೆ ಬಾಗಿಲಿಗೆ ತರಕಾರಿ, ಹಣ್ಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಗ್ರಾಮೀಣ ಜನರಿಗೆ ತರಕಾರಿ ಹಾಗೂ ಹಣ್ಣುಗಳ ಅಭಾವ ಉಂಟಾಗಬಾರದು ಎಂಬ ಉದ್ದೇಶದಿಂದ ತೋಟಗಾರಿಕಾ ಇಲಾಖೆ ಹಾಗೂ ಹಾಪ್‌ಕಾಮ್ಸ್‌ ಜಂಟಿಯಾಗಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತರಕಾರಿ ಹಾಗೂ ಹಣ್ಣುಗಳನ್ನು ಮಾರಾಟ ಮಾಡಲು ಮುಂದಾಗಿದೆ.

ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರು ಶುಕ್ರವಾರ ಜಿಲ್ಲಾಡಳಿತ ಭವನದ ಎದುರು ತರಕಾರಿ ಹಾಗೂ ಹಣ್ಣುಗಳ ಮಾರಾಟ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು. 

ನಂತರ ಮಾತನಾಡಿದ ಅವರು, ‘ಆನ್‌ಆರ್‌ಎಲ್‌ಎನ್‌ ಸಿಬ್ಬಂದಿ ಬಳಸಿಕೊಂಡು ಎಲ್ಲ 130 ಗ್ರಾಮ ಪಂಚಾಯಿತಿಗಳಲ್ಲೂ ತರಕಾರಿ ಹಾಗೂ ಹಣ್ಣುಗಳನ್ನು ಮಾರಾಟ ಮಾಡಲಾಗುವುದು. ಗ್ರಾಮ ಪಂಚಾಯಿತಿ ಆದ ನಂತರ ಇತರ ಹಳ್ಳಿಗಳಿಗೂ ಇದನ್ನು ವಿಸ್ತರಿಸಲಾಗುವುದು’ ಎಂದು ಹೇಳಿದರು. 

‘ಇದಲ್ಲದೇ, ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಶನಿವಾರದಿಂದ ಸಂಚಾರಿ ವಾಹನಗಳ ಮೂಲಕ ಎಲ್ಲರಿಗೂ ಅಗತ್ಯ ವಸ್ತುಗಳನ್ನು ಪೂರೈಸುವ ಉದ್ದೇಶವನ್ನು ಹೊಂದಿದ್ದೇವೆ’ ಎಂದರು. 

‘ಇದುವರೆಗೆ ಕಾಳಸಂತೆಯಲ್ಲಿ ವಸ್ತುಗಳ ಮಾರಾಟ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದಿಲ್ಲ. ಈಗಿನ ಸ್ಥಿತಿಯನ್ನು ದರ್ಬಳಕೆ ಮಾಡಿಕೊಂಡರೆ ಅಂತಹ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಜಿಲ್ಲಾಧಿಕಾರಿ ಉತ್ತರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು