ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ: ವಿದ್ಯಾರ್ಥಿನಿ ಜೊತೆಗೆ ಅತಿಥಿ ಶಿಕ್ಷಕ ಅಸಭ್ಯ ವರ್ತನೆಗೆ ಆಕ್ರೋಶ

Published 8 ಡಿಸೆಂಬರ್ 2023, 16:14 IST
Last Updated 8 ಡಿಸೆಂಬರ್ 2023, 16:14 IST
ಅಕ್ಷರ ಗಾತ್ರ

ಕೊಳ್ಳೇಗಾಲ: ತಾಲ್ಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕರೊಬ್ಬರು ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿರುವುದಕ್ಕೆ ‍ಪೋಷಕರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಶುಕ್ರವಾರ ಶಾಲೆಗೆ ಬಂದಿದ್ದ ಮಕ್ಕಳನ್ನು ಮನೆಗೆ  ಕಳುಹಿಸಿದರು. 

ಮಕ್ಕಳು ಶುಕ್ರವಾರವೂ ಶಾಲೆಗೆ ಬಂದಿದ್ದರು. ಶಾಲೆಗೆ ಬಂದ ಗ್ರಾಮಸ್ಥರು, ‘ನೀವು ಈ ಶಾಲೆಯಲ್ಲಿ ಓದುವುದು ಬೇಡ. ನಿಮಗೆ ಇಲ್ಲಿ ರಕ್ಷಣೆ ಇಲ್ಲ. ಆ ಬಾಲಕಿಗೆ ನ್ಯಾಯ ಸಿಗುವವರೆಗೂ ಶಾಲೆಗೆ ಯಾರೂ ಬರಬೇಡಿ’ ಎಂದು ಹೇಳಿ ಮನೆಗೆ ಕಳುಹಿಸಿದರು. 

‘ಶಾಲೆಯ ಮುಖ್ಯ ಶಿಕ್ಷಕ ಮತ್ತು ಸಹ ಶಿಕ್ಷಕರು ಈ ಘಟನೆಯನ್ನು ಮರೆಮಾಚಲು ಪ್ರಯತ್ನಿಸಿದ್ದು, ಅವರ ವಿರುದ್ಧವೂ ಸೂಕ್ತ ಕ್ರಮ ಜರುಗಿಸಬೇಕು. ಅಲ್ಲಿಯವರೆಗೂ  ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್. ಶಿಕ್ಷಕರ ಮೇಲೆ ನಂಬಿಕೆ ಇಟ್ಟು ಮಕ್ಕಳನ್ನು ಶಾಲೆಗೆ ಕಳಿಸುತ್ತೇವೆ. ಆದರೆ ಅಂತಹ ಶಿಕ್ಷಕರೇ ನಮ್ಮ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಾವು ಯಾರನ್ನು ನಂಬಬೇಕು ಎಂಬುದೇ ಅರ್ಥವಾಗುತ್ತಿಲ್ಲ’ ಎಂದು ಪೋಷಕರೊಬ್ಬರು ಅಳಲು ತೋಡಿಕೊಂಡರು.

ಸ್ಥಳಕ್ಕೆ ಬಂದ ಗ್ರಾಮಾಂತರ ಪಿಎಸ್ಐ ಗಣೇಶ್ ಗ್ರಾಮಸ್ಥರೊಂದಿಗೆ ಮಾತನಾಡಿ ಮನವೊಲಿಸಲು ಯತ್ನಿಸಿದರು.  

ಶಾಲೆಯಲ್ಲಿ 44 ಮಕ್ಕಳು ಓದುತ್ತಿದ್ದು, ಮುಖ್ಯ ಶಿಕ್ಷಕ ಹಾಗೂ ಒಬ್ಬ ಶಿಕ್ಷಕಿ ಇದ್ದಾರೆ.  ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಿಇಒ ಮಂಜುಳಾ, ‘ಶಾಲೆ ಹಾಗೂ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಮನವೊಲಿಸಿದ್ದೇವೆ. ತಪ್ಪಿತಸ್ಥರಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ಆಗುವುದು ಖಚಿತ. ನಾಳೆಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಹೇಳಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT