ನಗರಸಭೆ ಅಧಿಕಾರಿಗೆ ಬೀಳ್ಕೊಡುಗೆ: ನಿಯಮ ಉಲ್ಲಂಘನೆ ಆರೋಪ

ಚಾಮರಾಜನಗರ: ಇಲ್ಲಿನ ನಗರಸಭೆಯ ಅಧಿಕಾರಿಯೊಬ್ಬರು ಬುಧವಾರ ಸೇವೆಯಿಂದ ನಿವೃತ್ತಿಯಾಗಿದ್ದು, ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಆರೋಗ್ಯ ನಿರೀಕ್ಷಕರಾಗಿದ್ದ ಮಹದೇವಸ್ವಾಮಿ ಅವರು ಬುಧವಾರ ನಿವೃತ್ತಿಯಾಗಿದ್ದಾರೆ. ಅವರ ಬೀಳ್ಕೊಡುಗೆ ಸಮಾರಂಭವನ್ನು ನಗರದ ನಂದಿ ಭವನದಲ್ಲಿ ಆಯೋಜಿಸಲಾಗಿತ್ತು. ಕೋವಿಡ್ ಕಾರಣದಿಂದ ಕಾರ್ಯಕ್ರಮಗಳಲ್ಲಿ 40ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಆದರೆ, ಸಮಾರಂಭದ ವಿಡಿಯೊ ತುಣುಕು, ಫೋಟೊಗಳು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿದ್ದು, ಕೋವಿಡ್‌ನಿಯಮ ಪಾಲಿಸದೆ ಭಾಗವಹಿಸಿದ್ದು ಕಂಡು ಬಂದಿದೆ.
ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಶರವಣ ಅವರು, ‘ಮಹದೇವಸ್ವಾಮಿ ಅವರು ಕೋವಿಡ್ ಸೇನಾನಿಯಾಗಿ ಕಾರ್ಯನಿರ್ವಹಿಸಿದವರು. ನಗರಸಭೆಯ ಮುಂಚೂಣಿ ಕಾರ್ಯಕರ್ತರಾದ ಪೌರಕಾರ್ಮಿಕರು ಹಾಗೂ ಇತರ ಸಿಬ್ಬಂದಿ ಕೊನೆಯ ಬಾರಿ ಅವರನ್ನು ಭೇಟಿ ಮಾಡಿ ಅಭಿನಂದನೆ ಹೇಳಿದ್ದಾರೆ. ಹೊರಗಿನವರು ಯಾರೂ ಬಂದಿಲ್ಲ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.