ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸಲಾಗುತ್ತಿದ್ದು ಅರ್ಥಪೂರ್ಣ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಶ್ವ ಮಾನವ ಕುವೆಂಪು ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಡಿ.29ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವಮಾನವ ಕುವೆಂಪು ಜನ್ಮ ದಿನಾಚರಣೆ ಆಯೋಜಿಸಲಾಗಿದೆ. ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಕುವೆಂಪು ಅವರ ವಿಶ್ವಮಾನವ ಸಂದೇಶ, ಕುವೆಂಪು ಅವರ ವಿಚಾರಧಾರೆಗಳು, ಆದರ್ಶಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು. ವಿಜೇತರಿಗೆ ಕಾರ್ಯಕ್ರಮದ ದಿನ ಬಹುಮಾನ ವಿತರಣೆ ಮಾಡಬೇಕು ಎಂದು ತಿಳಿಸಿದರು.

ವಿಶ್ವ ಮಾನವ ಕುವೆಂಪು ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಟಿ.ಜವರೇಗೌಡ ನಿರ್ದೇಶನ ನೀಡಿದರು. ಸಭೆಯಲ್ಲಿ ಹಾಜರಿದ್ದ ಮುಖಂಡರು ಸಲಹೆ ನೀಡಿದರು.

ಸಂಘ ಸಂಸ್ಥೆಗಳ ಮುಖಂಡರಾದ ಚಾ.ರಂ.ಶ್ರೀನಿವಾಸಗೌಡ, ಸಿ.ಎಂ.ನರಸಿಂಹಮೂರ್ತಿ, ರಾಜಪ್ಪ, ಎಸ್.ಮಹೇಶ್ ಗೌಡ, ಜಿ.ಬಂಗಾರು, ಪಣ್ಯದಹುಂಡಿ ರಾಜು, ಲಿಂಗರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ವಿಶ್ವನಾಥ್ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.