ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿಗೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯರ ಭೇಟಿ

Published 29 ಜನವರಿ 2024, 16:23 IST
Last Updated 29 ಜನವರಿ 2024, 16:23 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಸಮೀಪದ ಕುದೇರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಈಚೆಗೆ ಭೇಟಿ ನೀಡಿ ಪರಿಶೀಲಿಸಿದರು.

‘ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರು ಮೂಲ ಸೌಕರ್ಯಗಳು ಉತ್ತಮವಾಗಿರುವಂತೆ ನೋಡಿಕೊಳ್ಳಬೇಕು. ಅಂಗನವಾಡಿ ಕೇಂದ್ರದ ಸುತ್ತ ಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ದಿನ ನಿತ್ಯದ ದಾಖಲಾತಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ತಾಯಿ ಮತ್ತು ಮಕ್ಕಳ ನಿರ್ವಹಣೆ ಉತ್ತಮವಾಗಿರಬೇಕು. ಜತೆಗೆ ಅವರಿಗೆ ಪೌಷ್ಟಿಕತೆಯೊಂದಿಗೆ ಗುಣಮಟ್ಟದ ಆಹಾರ ನೀಡಬೇಕು. ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಿಂದ ಯಾವುದೇ ಸಮಸ್ಯೆಗಳು ಬಾರದಂತೆ ಎಚ್ಚರ ವಹಿಸಬೇಕು’ ಎಂದು ವೆಂಕಟೇಶ್ ಎಂದು ತಿಳಿಸಿದರು.

ಮಕ್ಕಳ ಜಿಲ್ಲಾ ರಕ್ಷಣಾಧಿಕಾರಿ ಎನ್.ಚೆಲುವರಾಜು, ಸಿಬ್ಬಂದಿ ಸಿದ್ದಶೆಟ್ಟಿ, ಅಂಗನವಾಡಿ ಕಾರ್ಯಕರ್ತೆ ಮೀನಾ, ಸಹಾಯಕಿ ಮಹದೇವಮ್ಮ  ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT