ಗುಂಡ್ಲುಪೇಟೆ: ಪಟ್ಟಣದಲ್ಲಿ ಮತಗಳ್ಳತನ ವಿರುದ್ಧದ ಅಭಿಯಾನಕ್ಕೆ ಸ್ಟಿಕ್ಕರ್ ಅಂಟಿಸುವ ಮೂಲಕ ಶಾಸಕ ಎಚ್.ಎಂ.ಗಣೇಶಪ್ರಸಾದ್ ಚಾಲನೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಆದೇಶದ ಮೇರೆಗೆ ಮತಗಳ್ಳಗನದ ವಿರುದ್ಧ ಅಭಿಯಾನ ಆರಂಭಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕು ಎಂದು ಸಲಹೆ ನೀಡಿದರು.

ಹೊರ ರಾಜ್ಯದಲ್ಲಿ ಇತ್ತೀಚಿಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯೊಂದರಲ್ಲಿ 50 ಮತ ಹೆಚ್ಚುವರಿಯಾಗಿ ಚಲಾವಣೆಯಾಗಿದೆ. ಈ ಕುರಿತು ಸುಪ್ರಿಂ ಕೋರ್ಟ್ ಕೂಡ ಆದೇಶ ಎತ್ತಿ ಹಿಡಿದಿದೆ. ಇದರ ಬಗ್ಗೆ ಮತದಾರರು ಚಿಂತನೆ ನಡೆಸಬೇಕು. ಜೊತೆಗೆ ಬಿಜೆಪಿಯ ಮತಗಳ್ಳತನದ ವಿರುದ್ಧ ಇತರರಿಗೂ ತಿಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಡಹಳ್ಳಿ ಮಣಿ, ಗಿರೀಶ್ ಲಕ್ಕೂರು, ಗೋಪಾಲಪುರ ಲೋಕೇಶ್, ಸುನೀಲ್ ಶೆಟ್ಟಿ, ನಾಗರಾಜು, ಕರಕಲಮಾದಹಳ್ಳಿ ಪ್ರಭು, ಎಪಿಎಂಸಿ ಅಧ್ಯಕ್ಷ ನಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.