ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ನನ್ನ ನಡೆ-ಮತಗಟ್ಟೆ ಕಡೆ ಜಾಗೃತಿ ಜಾಥಾ 

Published 21 ಮಾರ್ಚ್ 2024, 16:04 IST
Last Updated 21 ಮಾರ್ಚ್ 2024, 16:04 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ವತಿಯಿಂದ ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾ ಹಾಗೂ  ಮಾನವ ಸರಪಳಿ ಎಲ್ಲರ ಗಮನ ಸೆಳೆಯಿತು.

ಲೋಕಸಭಾ ಚುನಾವಣೆ ಅಂಗವಾಗಿ ಚಾಮರಾಜೇಶ್ವರ ದೇವಾಲಯದ ಅವರಣದಲ್ಲಿ ಜಾಗೃತಿ ಜಾಥಾಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ ಹಸಿರು ನಿಶಾನೆ ತೋರಿದರು. 

ದೇವಾಲಯದಿಂದ ಹೊರಟ ಜಾಥಾದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು, ನಾಗರಿಕರು ‘ನನ್ನ ನಡೆ-ಮತಗಟ್ಟೆ ಕಡೆ’ ಹಾಗೂ ‘ಚುನಾವಣೆ ಪರ್ವ-ದೇಶದ ಗರ್ವ’ ಘೋಷಣೆಗಳನ್ನು ಮೂಗಿದರು.  ಬಳಿಕ ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿದರು.

ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಚಿಕ್ಕಬಸವಯ್ಯ, ನಗರಸಭೆ ಪರಿಸರ ಎಂಜಿನಿಯರ್ ಗಿರಿಜಮ್ಮ, ಕಂದಾಯ ನಿರೀಕ್ಷಕ ಶರವಣ, ಹಿರಿಯ ಆರೋಗ್ಯ ನಿರೀಕ್ಷಕಿ ಸುಷ್ಮಾ, ಸಮುದಾಯ ಸಂಘಟನಾ ಅಧಿಕಾರಿ ವೆಂಕಟನಾಯಕ್, ಇತರರು ಭಾಗವಹಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT