ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿಗಾಗಿ ಅಧಿಕಾರಿ, ನೌಕರರ ನಡಿಗೆ

Published 26 ಫೆಬ್ರುವರಿ 2024, 16:03 IST
Last Updated 26 ಫೆಬ್ರುವರಿ 2024, 16:03 IST
ಅಕ್ಷರ ಗಾತ್ರ

ಚಾಮರಾಜನಗರ:  ಲೋಕಸಭಾ ಚುನಾವಣೆಯ ಅಂಗವಾಗಿ ಮತದಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಂದ ನಗರದಲ್ಲಿ ಸೋಮವಾರ ವಾಕಥಾನ್ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಜಿಲ್ಲಾಡಳಿತ ಭವನದವರೆಗೆ ನಡಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಈ ಬಾರಿ ಚುನಾವಣಾ ಪರ್ವ-ದೇಶದ ಗರ್ವ ಎಂಬ ಘೋಷಣೆಯೊಂದಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಸಾರ್ವಜನಿಕರು, 18 ವರ್ಷ ತುಂಬಿದ ಯುವ ಮತದಾರರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮತದಾನ ಮಾಡಬೇಕು. ದೇಶದ ಪ್ರಜಾಪ್ರಭುತ್ವ ಬಲಿಷ್ಠ ಪಡಿಸಲು ಯುವಜನತೆ ಮುಂದಾಗಬೇಕು’ ಎಂದರು.

ಚಾಮರಾಜೇಶ್ವರ ದೇವಾಲಯದಿಂದ ಆರಂಭವಾದ ವಾಕಥಾನ್ ನಗರದ ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನ ತಲುಪಿತು. ಮತದಾನ ಜಾಗೃತಿ ಮೂಡಿಸುವ ಫಲಕಗಳನ್ನು ಹಿಡಿದ ಅಧಿಕಾರಿ, ನೌಕರರು ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ಘೋಷಣೆ ಕೂಗಿದರು. 

ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ.ಸುಧಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುರೇಶ್, ತಾಲ್ಲೂಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಜಿಲ್ಲಾ ಕ್ರೀಡಾಂಗಣ ಅಭಿವೃಧಿ ಸಮಿತಿ ಸದಸ್ಯ ಶ್ರೀನಿವಾಸ ಪ್ರಸಾದ್, ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT