ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಜಾಗೃತಿಗೆ ಬೃಹತ್‌ ವಾಕ್‌ಥಾನ್

Last Updated 24 ಜನವರಿ 2020, 16:19 IST
ಅಕ್ಷರ ಗಾತ್ರ

ಚಾಮರಾಜನಗರ: ‘ಸಂವಿಧಾನದ ಫಲವಾಗಿ ವಿವಿಧತೆಯಲ್ಲಿ ಏಕತೆ ಹೊಂದಿರುವನಮ್ಮ ಭಾರತ ದೇಶದಲ್ಲಿ ಎಲ್ಲರೂ ಸ್ವಾತಂತ್ರ್ಯ, ಸಮಾನತೆಯಿಂದ ಬದುಕಲು ಸಾಧ್ಯವಾಗಿದೆ’ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಡಿ.ವಿ. ಪಾಟೀಲ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಆವರಣದಲ್ಲಿಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ರೋಟರಿ ಸಂಸ್ಥೆ, ರೆಡ್‌ಕ್ರಾಸ್ ಸಂಸ್ಥೆ ಹಾಗೂ ಲಯನ್ಸ್ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಜಾಗೃತಿಗಾಗಿ ಶುಕ್ರವಾರ ಆಯೋಜಿಸಲಾಗಿದ್ದ ಬೃಹತ್ ವಾಕ್‌ಥಾನ್ ನಡಿಗೆಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಳಿಕ ಅವರೊಂದಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಹಾಗೂ ಗಣ್ಯರು ಸಂವಿಧಾನ ಜಾಗೃತಿ ಕುರಿತ ಪ್ರತಿಜ್ಞಾವಿಧಿಯನ್ನು ಬೋಧಿಸಿ, ವಾಕ್‌ಥಾನ್ ನಡಿಗೆಗೆ ಹಸಿರು ನಿಶಾನೆ ತೋರಿದರು.

ಬೃಹತ್‌ ವಾಕ್‌ಥಾನ್‌: ಜಿಲ್ಲಾ ನ್ಯಾಯಾಲಯದ ಆವರಣದಿಂದ ಜಾಗೃತಿ ನಡಿಗೆ ಆರಂಭವಾಯಿತು. ಬಳಿಕಕರಿನಂಜನಪುರ ಮುಖ್ಯರಸ್ತೆಯ ಮೂಲಕ ಸುಲ್ತಾನ್ ಷರೀಫ್ ಸರ್ಕಲ್, ಗುಂಡ್ಲುಪೇಟೆ ವೃತ್ತ, ದೊಡ್ಡ ಮತ್ತು ಚಿಕ್ಕ ಅಂಗಡಿ ಬೀದಿ, ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ, ಭುವನೇಶ್ವರಿ ವೃತ್ತದ ಮೂಲಕ ಹಾದು ಬಿ.ರಾಚಯ್ಯ ಜೋಡಿರಸ್ತೆಯಮೂಲಕಜಿಲ್ಲಾ ಆಡಳಿತ ಭವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯ ಮುಂಭಾಗ ಮುಕ್ತಾಯಗೊಂಡಿತು.

ಗಣ್ಯರು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆಪುಷ್ಪ ನಮನದಗೌರವ ಸಲ್ಲಿಸಿದರು.

ವಿದ್ಯಾರ್ಥಿಗಳು ಭಾಗಿ: ಸಂವಿಧಾನ ಜಾಗೃತಿ ಮೂಡಿಸುವ ವಾಕ್‌ಥಾನ್ ನಡಿಗೆಯಲ್ಲಿ ಎಲ್ಲ ಗಣ್ಯರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ನರ್ಸಿಂಗ್ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತುಸೆಷನ್ಸ್‌ನ್ಯಾಯಾಧೀಶ ಡಿ. ವಿನಯ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸಿ.ಜೆ.ಎಂ ಎಂ. ರಮೇಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್‌ ಸಿ.ಗಣಪತಿ ಜಿ. ಬಾದಾಮಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಮಹಮದ್ ರೋಷನ್ ಶಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿ. ಸ್ಮಿತಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್,ಎಎಸ್‌ಪಿಅನಿತಾ ಬಿ.ಹದ್ದಣ್ಣವರ್ ಹಾಗೂ ಗಣ್ಯರು ವಾಕ್‌ಥಾನ್‌ನಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT