ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುನಿಲ್ ಬೋಸ್ ಗೆಲ್ಲುವ ವಿಶ್ವಾಸ ಇತ್ತು: ಶಾಸಕ ಎಚ್.ಎಂ.ಗಣೇಶಪ್ರಸಾದ್

Published 5 ಜೂನ್ 2024, 16:29 IST
Last Updated 5 ಜೂನ್ 2024, 16:29 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಗ್ಯಾರಂಟಿ ಯೋಜನೆಗಳು ಹಾಗೂ ಕ್ಷೇತ್ರದ ಅಭಿವೃದ್ಧಿ ಕೆಲಸ ಮೆಚ್ಚಿದ ಮತದಾರರು ಲೋಕಸಭೆ ಚುನಾವಣೆಯಲ್ಲಿ ಸುನಿಲ್ ಬೋಸ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ್ದಾರೆ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಮೊದಲಿನಿಂದಲೂ ಇತ್ತು. ಅದರಂತೆ ಮತದಾರರು ಪಕ್ಷದ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ. ಎಲ್ಲಾ ವಿಭಾಗಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ದುಡಿಮೆ ಕಾರಣ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ 18,038 ಮುನ್ನಡೆ ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯದಲ್ಲೂ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಬಲಿಷ್ಠವಾಗಿದೆ ಎಂಬುದನ್ನು ಸಾಬೀತು ಮಾಡಲಾಗಿದೆ. ತಾಲ್ಲೂಕಿನ ಅಭಿವೃದ್ಧಿಗೆ ರಾಜ್ಯ ಸರ್ಕಾರ ಇನ್ನೂ ಹೆಚ್ಚಿನ ಅನುದಾನ ಕೊಡಲಿದೆ. ಜೊತೆಗೆ ನಮ್ಮ ಸಂಸದರು ಕಾಳಜಿವುಳ್ಳವರಾಗಿದ್ದು, ಕೇಂದ್ರದ ಯೋಜನೆಗಳಿಂದ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಪ್ರಚಾರದ ಆರಂಭದಿಂದಲೂ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಈ ಕಾರಣ ಬಿಜೆಪಿಯವರ ಇಲ್ಲ ಸಲ್ಲದ ಆರೋಪಗಳನ್ನು ಮೀರಿ ಮತದಾರರು ನಮಗೆ ಗೆಲುವು ತಂದುಕೊಟ್ಟಿದ್ದಾರೆ. ಅದೇ ರೀತಿ ಪಕ್ಷಕ್ಕಾಗಿ ದುಡಿದವರನ್ನು ನಾವು ಗೌರವಿಸುತ್ತೆವೆ ಎಂದು ತಿಳಿಸಿದರು.

ವಿಧಾನ ಸಭಾ ಚುನಾವಣೆಗೆ ಹೋಲಿಕೆ ಮಾಡಿದರೆ. ಮತ ಪ್ರಮಾಣ ಕಡಿಮೆಯಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ವ್ಯತ್ಯಾಸಗಳಿವೆ. ಹೀಗಾಗಿ ಸ್ವಲ್ಪ ಕಡಿಮೆಯಾಗಿದೆ. ಆದರೂ ಕೂಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ ಹೆಚ್ಚಿದೆ ಎಂದು ಹೇಳಿದರು.

ಚಾಮುಲ್ ಮಾಜಿ ಅಧ್ಯಕ್ಷ ಎಚ್.ಎಸ್.ನಂಜುಂಡ ಪ್ರಸಾದ್, ಗುಂಡ್ಲುಪೇಟೆ ಮತ್ತು ಬೇಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಬಿ.ರಾಜಶೇಖರ, ಬಿ.ಎಂ.ಮುನಿರಾಜು, ಜಿ.ಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಪಿ.ಚನ್ನಪ್ಪ, ಪಕ್ಷದ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕುಮಾರಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಪುರಸಭೆ ಮಾಜಿ ಉಪಾಧ್ಯಕ್ಷ ಎಸ್.ರಾಜಶೇಖರ್, ಸದಸ್ಯರಾದ ಜಿ.ಎಸ್.ಮಧುಸೂದನ್, ಎನ್.ಕುಮಾರ್, ಸುರೇಶ್ ಕಾರ್ಗಳ್ಳಿ ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT