ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಆಸ್ಪತ್ರೆ ಮುಂಭಾಗ ವೈದ್ಯಕೀಯ ತ್ಯಾಜ್ಯ ವಿಲೇವಾರಿ

Last Updated 30 ಮೇ 2021, 6:38 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಕೊರೊನಾ ಸೋಂಕಿತರು ಬಳಸಿದ ವೈದ್ಯಕೀಯ ತ್ಯಾಜ್ಯವನ್ನು ಪಟ್ಟಣದ ಕೋವಿಡ್ ಆಸ್ಪತ್ರೆ ಮುಂಭಾಗ ಸುರಿಯಲಾಗಿದ್ದು, ಇದರಿಂದ ಆಸ್ಪತ್ರೆಗೆ ಬರುವ ಸಾರ್ವಜನಿಕರಲ್ಲಿ ಭೀತಿ ಉಂಟಾಗಿದೆ.

ಪಟ್ಟಣದ ಆಸ್ಪತ್ರೆಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಅಲ್ಲಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಎಸೆಯಲಾಗುತ್ತಿದೆ. ರಾತ್ರಿ ವೇಳೆ ಬೀಡಾಡಿ ದನಗಳು ಆಸ್ಪತ್ರೆ ಬಳಿ ಬಂದು ತ್ಯಾಜ್ಯವನ್ನು ಚೆಲ್ಲಾಡುತ್ತಿವೆ. ಇದು ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರ ಆತಂಕಕ್ಕೆ ಕಾರಣವಾಗಿದೆ.

ತಾಲ್ಲೂಕು ಕೋವಿಡ್ ಆಸ್ಪತ್ರೆಯಲ್ಲಿ ತ್ಯಾಜ್ಯವನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿ ಮುಂಭಾಗದಲ್ಲಿ ಹಾಕುತ್ತಿದ್ದಾರೆ. ನಿಯಮದಂತೆ ವಿಲೇವಾರಿ ಕಡೆ ಗಮನಹರಿಸುತ್ತಿಲ್ಲ. ಇದರಿಂದ ಚೀಲಗಳು ರಾಶಿ ಬೀಳುವಂತಾಗಿದೆ. ಇದರಿಂದಾಗಿ ಕೊರೊನಾ ಸೋಂಕು ಹರಡುವ ಭೀತಿ ಎದುರಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ತಾಲ್ಲೂಕು ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಖಂಡನೀಯ. ಆಸ್ಪತ್ರೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಮುಂದೆ ಸಂಭವಿಸಬಹುದಾದ ಅನಾಹುತ ತಪ್ಪಿಸಲು ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳಬೇಕಿದೆ ಎಂದು ಮಾನವ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷ ನಾಗೇಂದ್ರ ಆಗ್ರಹಿಸಿದ್ದಾರೆ.

ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ತಿಳಿಸಲಾಗಿದೆ. ಡಿ ಗ್ರೂಪ್ ನೌಕರರ ಕೊರತೆಯಿಂದ ಈ ರೀತಿ ಆಗಿದೆ. ಅದನ್ನು ಸರಿಪಡಿಸುವ ಕೆಲಸ ಮಾಡುವುದಾಗಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT