ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಳ್ಳೇಗಾಲ: ತಿಮಿಂಗಲ ವಾಂತಿ ವಶ, ನಾಲ್ವರ ಬಂಧನ

Published 9 ಫೆಬ್ರುವರಿ 2024, 13:47 IST
Last Updated 9 ಫೆಬ್ರುವರಿ 2024, 13:47 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಹದಿನಾರು ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮಂಗಳೂರು ಜಿಲ್ಲೆಯ ಉಡುಪಿ ಮೂಲದ ಇಮ್ತಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರಿನ ಚಿತ್ರಂಜಲಿ ನಗರದ ನಿವಾಸಿ ಚೇತನ್ ಕುಮಾರ್, ಮಂಗಳೂರು ತಾಲ್ಲೂಕಿನ ಉಳ್ಳಾಲ ಗ್ರಾಮದ ಶೇಷಪ್ಪ, ಮಂಗಳೂರಿನ ಸುರತ್ಕಲ್ ನಿವಾಸಿ ವೆಂಕಟೇಶ್ ಬಂಧಿತರು.

ತಮಿಳುನಾಡಿನ ಸೇಲಂ ಕಾಳಸಂತೆಯಲ್ಲಿ ಮಾರಲು ಸಿದ್ಧರಾಗಿದ್ದರು. ನಂತರ ಟೀ ಕುಡಿಯಲು ತಾಲ್ಲೂಕಿನ ಸತ್ತೇಗಾಲ ಗ್ರಾಮದ ಹ್ಯಾಂಡ್ ಪೋಸ್ಟ್ ಬಳಿ ನಿಂತಿದ್ದರು. ಖಚಿತ ಮಾಹಿತಿ ಮೇರೆಗೆ ಪಿಎಸ್ಐ ವಿಜಯರಾಜು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದರು. ನಂತರ ಅವರ ಬಳಿ ಇದ್ದ ತಿಮಿಂಗಲ ವಾಂತಿ, ಮೊಬೈಲ್ ಫೋನ್, ಕಾರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಸವರಾಜು, ಸ್ವಾಮಿ, ರಾಮಚಂದ್ರ, ಶಂಕರ, ಚಾಲಕ ಪ್ರಭಾಕರ, ಬಸವರಾಜು ಇದ್ದರು.

ಕೊಳ್ಳೇಗಾಲ ಹದಿನಾರು ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್ ) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಕೊಳ್ಳೇಗಾಲ ಹದಿನಾರು ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್ ) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT