ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀಲಿಂಗ್‌ ಮಾಡುವಾಗ ಅಪಘಾತ: ಒಬ್ಬ ಗಂಭೀರ, ಇನ್ನೊಬ್ಬ ಪಾರು

Last Updated 1 ಮಾರ್ಚ್ 2021, 16:18 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಬೇಡರಪುರದ ಬಳಿ ಭಾನುವಾರ ಸಂಜೆ ಬೈಕ್‌ನಲ್ಲಿ ವೀಲಿಂಗ್‌ ನಡೆಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬ ಸಣ್ಣ ಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದ ಗಾಳಿಪುರದ ಮಿನಾರ್‌ ಮತ್ತು ನಿಶ್ಯು ಗಾಯಗೊಂಡವರು. ಇಬ್ಬರ ವಯಸ್ಸೂ 18 ವರ್ಷ ಎಂದು ಹೇಳಲಾಗಿದೆ. ಮಿನಾರ್‌ ಅವರಿಗೆ ಗಂಭೀರ ಏಟಾಗಿದೆ. ಭಾನುವಾರ ಸಂಜೆ ಇಬ್ಬರೂ ಚಾಮರಾಜನಗರ ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್‌ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಬೇಡರಪುರದ ಬಳಿ ಬೈಕ್‌ ನಿಯಂತ್ರಣ ತಪ್ಪಿ ಬೈಕ್‌ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಇಬ್ಬರೂ ಗಾಯಗೊಂಡರು. ತಕ್ಷಣ ಇಬ್ಬರನ್ನೂ ಮೈಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

'ನಿಶ್ಯು ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಮಿನಾರ್‌ ಅವರ ಮುಖ ಹಾಗೂ ತಲೆಗೆ ಗಂಭೀರವಾಗಿ ಏಟು ಬಿದ್ದಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾನುವಾರ ಸಂಜೆ ಘಟನೆ ನಡೆದಿದ್ದರೂ, ಪೊಲೀಸರಿಗೆ ಮಾಹಿತಿ ಇರಲಿಲ್ಲ. ಮಧ್ಯಾಹ್ನದ ವೇಳೆಗೆ ಪತ್ರಕರ್ತರು ಈ ಘಟನೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದ ನಂತರವಷ್ಟೇ ಗೊತ್ತಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT