ಬುಧವಾರ, ಜುಲೈ 6, 2022
21 °C

ಚಿಕಿತ್ಸೆ ನೀಡುತ್ತಿದ್ದ ನಕಲಿ ಬಾಬಾ ಜತೆಗೆ ಪತ್ನಿ ಅನೈತಿಕ ಸಂಬಂಧ: ಪತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ಮೈಸೂರಿನಲ್ಲಿ ಚಿಕಿತ್ಸೆ ನೀಡುತ್ತಿದ್ದ ಬಾಬಾನೊಂದಿಗೆ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಮನನೊಂದು ವ್ಯಕ್ತಿಯೊಬ್ಬರು ಪಟ್ಟಣದಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಪಟ್ಟಣದ ನಿವಾಸಿ ಮಹಮ್ಮದ್‌ ಅಫ್ವಾನ್‌ ಆತ್ಮಹತ್ಯೆ ಮಾಡಿಕೊಂ ಡವರು. ಸಾವಿಗೂ ಮುನ್ನ ಅವರು ಮರಣ ಪತ್ರಬರೆದಿದ್ದು, ‘ನನ್ನ ಸಾವಿಗೆ ಮೈಸೂರಿನ ಡೋಂಗಿ ಬಾಬಾ ಖುರ‍್ರಂ ಪಾಷಾ ಹಾಗೂ ಆತನ ಇಬ್ಬರು ಸಹಚರರು ಕಾರಣ’ ಎಂದು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಅಫ್ವಾನ್‌ ಅವರು ತಮ್ಮ ಪತ್ನಿ ತಾನ್ಜೇನಿಯಾ ಕೌಸರ್ ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಬಾಬಾ ಖುರ‍್ರಂ ಪಾಷಾ ಎಂಬುವವರ ಬಳಿ ಚಿಕಿತ್ಸೆ ಕೊಡಿಸಲು ಕರೆದೊಯ್ಯುತ್ತಿದ್ದರು. ಈ ಸಂದರ್ಭದಲ್ಲಿ ಪಾಷಾ ಮತ್ತು ಅವರ ಇಬ್ಬರು ಸಹಚರರು ಕೌಸರ್ ಅವರ ತಲೆ ಕೆಡಿಸಿ ಬಲೆಗೆ ಬೀಳಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಮನನೊಂದ ಮಹಮದ್ ಅಫ್ಘಾನ್ ಶುಕ್ರವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

‘ನನ್ನ ಪತ್ನಿ ತಲೆಕೆಡಿಸಿ ಬಾಬಾ ಅನೈತಿಕ ಸಂಬಂಧ ಹೊಂದಿದ್ದಾನೆ. ಅವರನ್ನು ಯಾವುದೇ ಕಾರಣಕ್ಕೂ ಬಿಡಬೇಡಿ’ ಎಂದು ಮರಣಪತ್ರದಲ್ಲಿ ಅಫ್ವಾನ್‌ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು