ಗುಂಡ್ಲುಪೇಟೆ: ಜಮೀನಿಗೆ ತೆರಳಿದ್ದ ರೈತನ ಮೇಲೆ ಕಾಡೆಮ್ಮೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಕುಂದಕೆರೆ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.

ಕುಂದಕೆರೆ ಗ್ರಾಮದ ರೈತ ಪಾಲಾಕ್ಷ ಎಂಬುವವರ ಮೇಲೆ ಕಾಡೆಮ್ಮೆ ದಾಳಿ ಮಾಡಿದ್ದು, ರೈತನ ತೊಡೆ, ಕತ್ತಿನ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಗಾಯಾಳುವನ್ನು ರೈತ ಮುಖಂಡರು ಚಾಮರಾಜನಗರದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ರೈತನ ಮೇಲೆ ಕಾಡಮ್ಮೆ ದಾಳಿ ಮಾಡಿರುವ ವಿಷಯವನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು ಕೂಡ ಘಟನಾ ಸ್ಥಳಕ್ಕೆ ಅಧಿಕಾರಿಗಳು ಬಾರದೆ ಕೆಳ ಹಂತದ ದಿನಗೂಲಿ ನೌಕರರನ್ನು ಕಳುಹಿಸಿರುವುದಕ್ಕೆ ಇಲಾಖೆಯ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಹಾರಕ್ಕೆ ಒತ್ತಾಯ: ಕಾಡೆಮ್ಮೆ ದಾಳಿಯಿಂದ ಗಾಯಗೊಂಡಿರುವ ರೈತನಿಗೆ ಅರಣ್ಯ ಇಲಾಖೆ ಸೂಕ್ತ ಚಿಕಿತ್ಸೆ ಕೊಡಿಸುವ ಜೊತೆಗೆ ಪರಿಹಾರ ನೀಡುವಂತೆ ರೈತ ಮುಖಂಡ ಕುಂದಕೆರೆ ಸಂಪತ್ತು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.