ಕೊಳ್ಳೇಗಾಲ: ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಹೊರವಲಯದ ಗುಂಡಾಲ್ ಜಲಾಶಯದ ವ್ಯಾಪ್ತಿಯ ಜಮೀನುಗಳಲ್ಲಿ ಕಾಡು ಹಂದಿಗಳು ದಾಳಿ ಮಾಡಿ ಬೆಳೆಗಳನ್ನು ನಾಶ ಮಾಡಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಬಿಆರ್ಟಿ ವಲಯ ಅರಣ್ಯ ಅಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.

ಗ್ರಾಮದ ರೈತ ಮಾದೇಶ್ ಅವರು ಎರಡು ಎಕರೆ ಜಮೀನಿನಲ್ಲಿ ಭತ್ತದ ಫಸಲು ಹಾಗೂ ಆರ್.ವೆಂಕಟೇಶ್ ಅವರ 5 ಎಕರೆ ಜಮೀನಿನಲ್ಲಿ ಮುಸುಕಿನ ಜೋಳದ ಫಸಲುಗಳನ್ನು ನಾಶ ಮಾಡಿವೆ.

‘10 ವರ್ಷಗಳಿಂದ ಜಲಾಶಯದ ವ್ಯಾಪ್ತಿಯ ರೈತರ ಜಮೀನಿನಲ್ಲಿ ಕಾಡು ಪ್ರಾಣಿಗಳ ಪದೇ ಪದೇ ದಾಳಿ ಮಾಡುತ್ತಿದ್ದರೂ ಯಾವ ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ. ಕಾಡು ಹಂದಿಗಳು ಸೇರಿದಂತೆ ಅನೇಕ ಪ್ರಾಣಿಗಳು ನಮ್ಮ ಬೆಳೆಗಳನ್ನು ನಾಶ ಮಾಡುತ್ತಿದ್ದು, ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದೆ. ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ’ ಎಂದು ರೈತರು ದೂರಿದರು.

‘ಮೊದಲೇ ರೈತರು ಸಾಲ ಮಾಡಿ ಬೆಳೆ ಬೆಳೆದಿದ್ದೇವೆ. ಕಾಡು ಪ್ರಾಣಿಗಳ ಕಾಟ ಮಿತಿಮೀರಿದ್ದು, ರೈತರು ಜೀವನ ನಡೆಸುವುದೇ ಕಷ್ಟವಾಗಿದೆ. ಆದ್ದರಿಂದ ಕೂಡಲೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕು. ಕಾಡುಪ್ರಾಣಿ ಹಾವಳಿಯನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಮಾದೇಶ್, ಕಾರ್ಯದರ್ಶಿ ವೆಂಕಟೇಶ್. ಆರ್, ಸದಸ್ಯ ಬಲನಿಂಗಶೆಟ್ಟಿ, ಶ್ರೀನಿವಾಸ್, ಮಾದೇಶ್, ರಾಚಪ್ಪ, ದಿಲೀಪ್ ಕುಮಾರ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.