ಮಂಗಳವಾರ, ಜನವರಿ 26, 2021
16 °C

ಸಚಿವ ಸ್ಥಾನ ಸಿಕ್ಕರೆ, ಬಿಜೆಪಿ ಸೇರ್ಪಡೆ ಖಚಿತ: ಕೊಳ್ಳೇಗಾಲ ಶಾಸಕ ಎನ್‌.ಮಹೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ’ಸಚಿವ ಸ್ಥಾನ ನೀಡಿದರೆ, ಬಿಜೆಪಿಗೆ ಸೇರುವುದು ಖಂಡಿತ’ ಎಂದು, ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿರುವ, ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರು ಹೇಳಿದರು. 

ಬಿಳಿಗಿರಿರಂಗನಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸೇರ್ಪಡೆ ಬಗ್ಗೆ ನಾನು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸಂಕ್ರಾಂತಿ ಕಳೆಯಲಿ. ನಂತರ ನೋಡೋಣ. ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೆ ಅಂತಹ ಸಂದರ್ಭ ಸೃಷ್ಟಿಯಾಗಬೇಕು. ನಾನಾಗಿಯೇ ತೀರ್ಮಾನ ಕೈಗೊಳ್ಳುವುದಕ್ಕೆ ಆಗುವುದಿಲ್ಲ’ ಎಂದರು. 

’ಒಂದು ಸ್ಥಾನಮಾನ ಸಿಕ್ಕಿದರೆ, ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂಬ ಅಪೇಕ್ಷೆಯನ್ನು ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ’ ಎಂದರು. 

ಈ ವಿಚಾರವಾಗಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು